ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ದೀಪ ಪ್ರದಾನ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2021-22ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವು ಮಾ. 16 ರಂದು ಜರುಗಿತು. ಜ್ಞಾನದ ಸಂಕೇತವಾದ ದೀಪವನ್ನು ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಯನ್ನು ಮಾಡಲಾಗಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು.

 

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಸಂತ ಮಾಧವ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು, ಗುರು ಹಿರಿಯರ ಆಶೀರ್ವಾದವಿದ್ದರೆ ಯಶಸ್ಸು ಅಸಾಧ್ಯವಲ್ಲ ಎಂದರು.

ವಿದ್ಯಾರ್ಥಿಗಳ ಪರವಾಗಿ ಮಹತಿರಾಣಿ ಪಿ.ಎಸ್. ಸಾನ್ವಿ ಕಾಮತ್, ಮಿಸ್ಕಿಯಾ ಹಾಗೂ ಉಸ್ಮಾನ್ ಸಹಲ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವಿದ್ಯಾಲಯದ ಮುಖ್ಯ ಶಿಕ್ಷಕಿ ವೀಣಾ ಆರ್. ಪ್ರಸಾದ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೀಳ್ಕೊಡಲ್ಪಟ್ಟ ವಿದ್ಯಾರ್ಥಿಗಳು ತಮ್ಮ ನೆನಪಿನ ಕಾಣಿಕೆಯಾಗಿ ಕಂಪ್ಯೂಟರ್ ಹಾಗೂ ಕ್ರೀಡಾ ಸಾಮಾಗ್ರಿಗಳನ್ನು ನೀಡಿದರು. ವಿದ್ಯಾಲಯದ ಸಹ ಶಿಕ್ಷಕರುಗಳಾದ  ನಿಶಿತಾ ಕೆ.ಕೆ. ಹಾಗೂ ಸದಾಶಿವ ಶಿವಗಿರಿ ಕಲ್ಲಡ್ಕ ಇವರು ವಿದ್ಯಾರ್ಥಿಗಳು ತಮ್ಮೊಂದಿಗೆ ಕಳೆದ ದಿನಗಳನ್ನು ಮೆಲುಕು ಹಾಕುವುದರೊಂದಿಗೆ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಶಿಕ್ಷಕ ವೃಂದದವರು ಬೀಳ್ಕೊಡಲ್ಪಡುವ ವಿದ್ಯಾರ್ಥಿಗಳಿಗೆ ಅವರ ಮುಂದಿನ ಜೀವನವು ಹಣತೆಯಂತೆ ಬೆಳಗಲಿ ಎಂಬ ಆಶಯದೊಂದಿಗೆ ಪ್ರಜ್ವಲಿಸುವ ಹಣತೆಯನ್ನು ನೀಡಿ ಶುಭ ಹಾರೈಸಿದರು.

ವಿದ್ಯಾರ್ಥಿಗಳಾದ ಮೇಘನಾ ಸ್ವಾಗತಿಸಿ, ನಿಶಿತ್ ವಂದಿಸಿದರು, ತೇಜಸ್ವಿ ಕೆ. ಹಾಗೂ ಮಹಮ್ಮದ್ ಫಾರಿಶ್ ಬಸ್ತಿಕ್ಕಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here