ಉಪ್ಪಿನಂಗಡಿ: ವಿಜಯ ವಿಕ್ರಮ ಕಂಬಳ ಸಮಿತಿ ಪದಾಧಿಕಾರಿಗಳಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

0

ಪುತ್ತೂರು: ಕೋಡಿಂಬಾಡಿಯ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ನೇತೃತ್ವದ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಪದಾಧಿಕಾರಿಗಳು ಮಾ.21ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

 

ಉಪ್ಪಿನಂಗಡಿಯ ಕೂಟೇಲು ನೇತ್ರಾವತಿ ನದಿ ಕಿನಾರೆಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ಎಪ್ರಿಲ್ 2ರಂದು ನಡೆಯಲಿರುವ 36ನೇ ವರ್ಷದ ವಿಜಯ ವಿಕ್ರಮ ಜೋಡುಕರೆ ಕಂಬಳವು ಯಶಸ್ವಿಯಾಗಿ ನಡೆಯಲಿ ಎಂದು ಡಾ.ಹೆಗ್ಗಡೆಯವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು. ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಽಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಸಹಸಂಚಾಲಕರಾದ ಜಯಪ್ರಕಾಶ್ ಬದಿನಾರು, ಶಿವರಾಮ ಶೆಟ್ಟಿ ಗೋಳ್ತಮಜಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here