ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಕೆ.ಪಿ.ಸಿ.ಸಿ. ಉಸ್ತುವಾರಿಯಾಗಿ ಟಿ.ಎಂ.ಶಹೀದ್ ತೆಕ್ಕಿಲ್ ನೇಮಕ

0

 

ಕರ್ನಾಟಕದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಯ ಉಸ್ತುವಾರಿಯಾಗಿ ಕೆ.ಪಿ.ಸಿ.ಸಿ.ಯ ಮಾಜಿ ಕಾರ್ಯದರ್ಶಿ ಹಾಗೂ ಕಾಂಗ್ರೇಸ್ ನ ಹಿರಿಯ ಮುಖಂಡ ಟಿ.ಎಂ ಶಹೀದ್ ತೆಕ್ಕಿಲ್ ಅವರು ಎ.ಐ.ಸಿ.ಸಿ ಅನುಮೋದನೆಯೊಂದಿಗೆ ಕೆ.ಪಿ.ಸಿ.ಸಿ ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕ ಮಾಡಿದ್ದಾರೆ.


ಟಿ.ಎಂ ಶಾಹೀದ್ ತೆಕ್ಕಿಲ್ ಸುಳ್ಯ ತಾಲೂಕು ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕೆರೂರು, ಬ್ಯಾಡಗಿ ಮತ್ತು ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೆ.ಪಿ.ಸಿ.ಸಿ ಯ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿದ್ದರು. ಸದಸ್ಯತ್ವ ನೋಂದಣಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ.ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನ ನೋಂದಾಯಿಸಿದ್ದು ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿದ್ದರು. 2001ರಲ್ಲಿ ರಾಜ್ಯ ಯುವ ಪ್ರಶಸ್ತಿಗೆ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ,
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆಯ ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ , ಕರ್ನಾಟಕ ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್ ನ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಸಾಮಾಜಿಕ, ರಾಜಕೀಯ, ಕ್ರೀಡೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ.ಇವರು ಎನ್.ಎಸ್.ಯು.ಐ, ಯುವ ಕಾಂಗ್ರೆಸ್, ಕೆ.ಪಿ.ಸಿ.ಸಿ ಯ ಅಲ್ಪಸಂಖ್ಯಾತ ಘಟಕ, ಕೆ.ಪಿ.ಸಿ.ಸಿಯಲ್ಲಿ ದುಡಿದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ವಿವಿಧ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ಲೋಕ ಸಭಾ ಕ್ಷೇತ್ರದಲ್ಲಿ ದುಡಿದಿದ್ದಾರೆ. ಪ್ರತಿಷ್ಠಿತ ತೆಕ್ಕಿಲ್ ಮನೆತನದವರು .
ಪಕ್ಷ ಸಂಘಟನೆ ಮತದಾರರ ಪಟ್ಟಿಗೆ ಮತದಾರರ ಸೇರ್ಪಡೆ, ವಿಧಾನ ಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಮಟ್ಟಕ್ಕೆ ಭೇಟಿ ನೀಡಿ ಸ್ಥಳೀಯ ನಾಯಕರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು ಹಿರಿಯ ಮುಖಂಡರುಗಳು, ಮಾಜಿ ಸಚಿವರು, ಶಾಸಕರು ಪಕ್ಷದ ಪ್ರಮುಖರ ಸಹಿತ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳನ್ನು ಭೇಟಿಯಾಗಿ ಮನವೊಲಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ವಿಜಯಗೊಳಿಸಲು ತನ್ನ ಸಂಪೂರ್ಣ ಸಮಯವನ್ನು ಮುಂದಿನ ವಿಧಾನ ಸಭಾ ಚುನಾವಣೆವರೆಗೆ ಮೀಸಲಿಡುವುದಾಗಿ ಟಿ.ಎಂ ಶಹೀದ್ ತೆಕ್ಕಿಲ್ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here