ನ.6 : ಮುಕ್ಕೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

 

 

ಬೆಳ್ಳಾರೆ ರೋಟರಿ ಕ್ಲಬ್ ಟೌನ್, ಕಾನಾವು ಪ್ಯಾಮಿಲಿ ಹಾಗೂ ದೇರಳಕಟ್ಟೆ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಹಾಸ್ಪಿಟಲ್ ಸಹಯೋಗದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾನಾವು ತಿರುಮಲೇಶ್ವರ ಭಟ್ ಇವರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರವು ನ. 6 ರಂದು ಮುಕ್ಕೂರು ಸ.ಹಿ.ಪ್ರಾ.ಶಾಲೆ ವಠಾರದಲ್ಲಿ ನಡೆಯಲಿದೆ.

ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.00 ರ ತನಕ ನೋಂದಣಿಗೆ ಅವಕಾಶ ಇರಲಿದೆ. ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ (ಶುಗರ್) ತಪಾಸಣೆ, ಇಸಿಜಿ, ಇತರೆ ಸಾಮಾನ್ಯ ವೈದ್ಯಕೀಯ ವಿಭಾಗ, ಕಿವಿ-ಮೂಗು-ಗಂಟಲು ವಿಭಾಗ, ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ, ಸ್ತ್ರೀರೋಗ ಚಿಕಿತ್ಸಾ ವಿಭಾಗ, ಕಣ್ಣಿನ ವಿಭಾಗದಲ್ಲಿ ತಪಾಸಣೆ ಚಿಕಿತ್ಸೆ ನೀಡಲಾಗುತ್ತದೆ. ತೀರಾ ಅಗತ್ಯವುಳ್ಳವರಿಗೆ ಉಚಿತವಾಗಿ ಕನ್ನಡಕ ನೀಡಲಾಗುತ್ತದೆ.

ಕಾರ್ಯಕ್ರಮವನ್ನು ಅನಿತಾ ಟಿ ಭಟ್ ಕಾನಾವು ಉದ್ಘಾಟಿಸಲಿದ್ದಾರೆ. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಕೇಶವ ಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೆರುವಾಜೆ ಗ್ರಾ.ಪಂ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ದೇರಳಕಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಜಾರಿಟೆಬಲ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ವಿಭಾಗದ ಪ್ರಬಂಧಕ ಹೇಮಂತ್ ಶೆಟ್ಟಿ, ಮುಕ್ಕೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here