ಲಾವತ್ತಡ್ಕ: ಟಿಪ್ಪರ್ ಪಲ್ಟಿ, ಇಬ್ಬರಿಗೆ ಗಾಯ

0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾ.23ರಂದು ಬೆಳಿಗ್ಗೆ ನಡೆದಿದೆ.

 

 


ಮಡಂತ್ಯಾರುನಿಂದ ಶಿರಾಡಿ ಪ್ಲಾಂಟ್‌ಗೆ ಜಲ್ಲಿ ಹುಡಿ ಸಾಗಿಸುತ್ತಿದ್ದ ಟಿಪ್ಪರ್ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕ ಹಾಗೂ ಸಹಾಯಕ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ಆಂಬುಲೆನ್ಸ್‌ನಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here