ಜಾಲ್ಸೂರು: ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

 

ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲಿನಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಆಚರಿಸಲಾಯಿತು.
ಶಾಲೆಯ ಸ್ಥಾಪಕ ಅಧ್ಯಕ್ಷ ಅಬ್ದುಲ್ ರಜಾಕ್ ಅವರು ಅಧ್ಯಕ್ಷತೆ ವಹಿಸಿ, ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವವನ್ನು ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾಹ್ನವಿ. ಸಿ. ಕೆ. ಪ್ರಾಸ್ತಾವಿಕ ಭಾಷಣ ಮಾಡಿದರು.
ಸಹ ಶಿಕ್ಷಕಿಯರಾದ ಶ್ರೀಮತಿ ಮಂಗಳ, ಶ್ರೀಮತಿ ಜಯಂತಿ, ಕನ್ನಡ ನಾಡು ನುಡಿಯ ಬಗ್ಗೆ ತಮ್ಮ ಅನಿಸಿಕೆ ಯನ್ನು ವ್ಯಕ್ತಪಡಿಸಿದರು.
ಬಳಿಕ ಶಾಲಾ ಮಕ್ಕಳಿಂದ ಸಮೂಹ ಗಾಯನ ಹಾಗೂ ಭಾಷಣ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀಮತಿ ಮಿಶ್ರೀಯ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಪೂರ್ಣಿಮಾ ವಂದಿಸಿದರು. ಸಹಶಿಕ್ಷಕಿಯರು ಸಹಕರಿಸಿದರು.

LEAVE A REPLY

Please enter your comment!
Please enter your name here