ರೋಟರಿ ವಿದ್ಯಾಸಂಸ್ಥೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ

0

 

ನ.1 ರಂದು ರೋಟರಿ ವಿದ್ಯಾ ಸಂಸ್ಥೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಸುಳ್ಯದ ಅಧ್ಯಕ್ಷರಾಗಿರುವ ರೊ. ಚಂದ್ರಶೇಖರ್ ಪೇರಾಲ್ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ದಿನದ ಮಹತ್ವವನ್ನು ತಿಳಿಸಿದರು . ವಿದ್ಯಾಸಂಸ್ಥೆಯ ಸಂಚಾಲಕರಾದ ರೊ.ಗಿರಿಜಾಶಂಕರ್ ತುದಿಯಡ್ಕ ನಾಡ ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಆಡಳಿತ ಮಂಡಳಿ ಸದಸ್ಯರಾದ ರೊ.ಮಹಾಲಕ್ಷ್ಮೀ ಕೋರಂಬಡ್ಕ , ರೊ. ಬೆಳ್ಯಪ್ಪ ಗೌಡ, ಸ್ಥಾಪಕಾಧ್ಯಕ್ಷರಾಗಿರುವ ರೊ.ರಾಮಚಂದ್ರ.ಪಿ. , ಪೂರ್ವಾಧ್ಯಕ್ಷರಾದ ರೊ.ಗಣೇಶ್ ಭಟ್ , ರೊ. ಪ್ರಭಾಕರನ್ ನಾಯರ್ , ರೊ. ಶ್ರೀ ಕೃಷ್ಣ ಭಟ್ , ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀ ಮತಿ ವೀಣಾ ಶೇಡಿಕಜೆ, ಪಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ , ವಿದ್ಯಾ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು , ಪೋಷಕರು ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಶ್ರವಣ್ ಶೇಡಿಕಜೆ ಸ್ವಾಗತಿಸಿ, ವಿದ್ಯಾರ್ಥಿನಿ ಭಾನವಿ ಕೊಯಿಂಗಾಜೆ ವಂದಿಸಿದರು. ವಿದ್ಯಾರ್ಥಿ ನಾಯಕಿ ಅನುಜ್ಞಾ. ಎನ್ .ಹೆಚ್ ಕಾರ್ಯಕ್ರಮ ನಿರೂಪಿಸಿದರು.

 

 

LEAVE A REPLY

Please enter your comment!
Please enter your name here