ಕ.ಸಾ.ಪ.- ಸಾಹಿತ್ಯ ಸಂಭ್ರಮದ ಉದ್ಘಾಟನಾ ಸಮಾರಂಭ

0

 

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯಮತ್ತು ಭಾವನಾ ಬಳಗ ಸುಳ್ಯ ಇದರ ಸಹಭಾಗಿತ್ವದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆ ಎಲಿಮಲೆ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ 2022 ರ ಉದ್ಘಾಟನಾ ಸಮಾರಂಭ ಹಾಗೂ ಭಾವನಾ ಸುಗಮ ಸಂಗೀತ ಬಳಗ ಸುಳ್ಯ ಇವರ ಸಹಯೋಗದಲ್ಲಿ ಗಾನ ಯಾನ – ಗೀತೆ ಗಾಯನ ಕಾರ್ಯಕ್ರಮ ನ.1ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಞಾನದೀಪ ವಿಶ್ವಸ್ಥ ಮಂಡಳಿ ಇದರ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಾಹಿತ್ಯ ಪರಿಷತ್ ಮತ್ತು ಸುವಿಚಾರ ಸಾಹಿತ್ಯ ವೇದಿಕೆ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯ ಗುರುಗಳಾದ ಗದಾಧರ ಬಾಳುಗೋಡು, ಜ್ಞಾನದೀಪ ವಿದ್ಯಾಸಂಸ್ಥೆಯ ನಿರ್ದೇಶಕರಾದ ಕೃಷ್ಣಯ್ಯ ಮೂಲೆತೋಟ, ಭಾವನಾ ಸುಗಮ ಸಂಗೀತ ಬಳಗ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕೆ. ಆರ್. ಗೋಪಾಲಕೃಷ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ರಾಮಚಂದ್ರ ಪಲ್ಲತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ, ದಯಾನಂದ ಆಳ್ವ*, ಕಾರ್ಯದರ್ಶಿ ಶ್ರೀಮತಿ. ಚಂದ್ರಮತಿ ಕೆ., ಕಾರ್ಯಕ್ರಮ ಸಂಯೋಜಕರಾದ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ರಾದ ಗೋಪಿನಾಥ್ ಮೆತ್ತಡ್ಕ, ಗಾಯಕರಾದ ರಮ್ಯಾ ದಿಲೀಪ್ ಬಾಬ್ಲುಬೆಟ್ಟು, ಬಾಲಕೃಷ್ಣ ನೆಟ್ಟಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಸಾಪ ನಿರ್ದೇಶಕರಾದ ಗೋಪಿನಾಥ್ ಮೆತ್ತಡ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಕಸಾಪ ಕಾರ್ಯದರ್ಶಿ ಚಂದ್ರಮತಿ ಕೆ. ಧನ್ಯವಾದ ಸಲ್ಲಿಸಿದರು.
ಕ.ಸಾ.ಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು‌.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಭಾವನ ಸುಗಮ ಸಂಗೀತ ಬಳಗ ಸುಳ್ಯ ಇವರಿಂದ ಗಾನ ಯಾನ-ಗೀತ ಗಾಯನ ಕಾರ್ಯಕ್ರಮ ನಡೆಯಿತು.ಕನ್ನಡ ಕವಿಗಳ ಕನ್ನಡ ನಾಡು ನುಡಿ ಸಂಬಂದಿಸಿದ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು. ಜ್ಞಾನ ದೀಪ ವಿದ್ಯಾಸಂಸ್ಥೆಯ ಮುಖ್ಯಗುರುಗಳಾದ ಗದಾಧರ ಬಾಳುಗೋಡು ವಂದಿಸಿದರು.

LEAVE A REPLY

Please enter your comment!
Please enter your name here