ಮರ್ಕಂಜ : ಮೃತ್ತಿಕೆ ಸಂಗ್ರಹಣಾ ರಥ ಆಗಮನ

0

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯು ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಮೃತ್ತಿಕೆ ಸಂಗ್ರಹಣಾ ರಥವು ನ.2ರಂದು ಮರ್ಕಂಜಕ್ಕೆ ಆಗಮಿಸಿತು.

 

ಮರ್ಕಂಜದ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ರಥವನ್ನು ಮಹಿಳೆಯರು ಪೂರ್ಣಕುಂಭ ಸ್ವಾಗತ ಹಾಗೂ ವಿದ್ಯಾರ್ಥಿಗಳಿಂದ ಬ್ಯಾಂಡ್ ನೊಂದಿಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಎಲ್ಲಾ ಪವಿತ್ರ ಕ್ಷೇತ್ರಗಳ ಮೃತ್ತಿಕೆ ಸಮರ್ಪಣೆ ಮಾಡಿ ರಥವನ್ನು ಮುಂದಿನ ಗ್ರಾಮಕ್ಕೆ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಪಿಡಿಒ ರವಿಚಂದ್ರ, ಪಂಚಸ್ಥಾಪನೆಗಳ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ, ಸದಸ್ಯರುಗಳು, ಪಂಚಾಯತ್ ಸದಸ್ಯರು, ವಿದ್ಯಾರ್ಥಿ ಗಳು, ಶಿಕ್ಷಕರು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here