ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದ ಗಾಯಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ನಗರಸಭಾ ಸದಸ್ಯ

0

ಪುತ್ತೂರು: ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದ ಗಾಯಳುಗಳನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಮಾನವೀಯತೆ ಮೆರೆದಿದ್ದಾರೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಪ್ಪಳಿಗೆ ಸಮೀಪ ಸ್ಕೂಟರ್ ವೊಂದು ಸ್ಕಿಡ್ ಆಗಿ ಸ್ಕೂಟರ್ ನಲ್ಲಿದ್ದ ತಂದೆ ಮಗಳು ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಇದೇ ಸಂದರ್ಭದಲ್ಲಿ ಅದೇ ದಾರಿಯಾಗಿ ಕಚೇರಿಗೆ ಹೋಗುತ್ತಿದ್ದ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಗಾಯಳುಗಳನ್ನು ತನ್ನದೇ ವಾಹನದಲ್ಲಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

LEAVE A REPLY

Please enter your comment!
Please enter your name here