ಕಾಂಚನ ಪೆರ್ಲ ದೇವಸ್ಥಾನದಲ್ಲಿ ಸುಸಜ್ಜಿತ ಸಭಾಭವನ ಲೋಕಾರ್ಪಣೆ

0

  • 3 ಸಾವಿರದ ಚದರ ಅಡಿ ವಿಸ್ತೀರ್ಣ
  • 1 ಸಾವಿರ ಮಂದಿಗೆ ಕುಳಿತುಕೊಳ್ಳಲು ಅವಕಾಶ
  • ಪ್ರತ್ಯೇಕ ಪಾಕಶಾಲೆ ವ್ಯವಸ್ಥೆ
  •  ಅತ್ಯಂತ ಕನಿಷ್ಠ ಬಾಡಿಗೆ ದರ ನಿಗದಿ

ನೆಲ್ಯಾಡಿ: ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಡಬ ತಾಲೂಕಿನ ಆಲಂತಾಯ ಗ್ರಾಮದ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಸಭಾಭವನದ ಲೋಕಾರ್ಪಣೆ ಮಾ.22ರಂದು ನಡೆಯಿತು.

 


ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾಗೂ ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಡಾ| ಜಿ.ಭೀಮೇಶ್ವರ ಜೋಶಿಯವರು ಸಭಾಭವನ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಧನ್ಯಕುಮಾರ್ ರೈ ಬಿಳಿಯೂರುಗುತ್ತುರವರು, ನೂತನ ಸಭಾಭವನ 3 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿದ್ದು ೨೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ೫೮ ದಿನದಲ್ಲಿ ಸಭಾಭವನ ನಿರ್ಮಾಣ ಕಾಮಗಾರಿ ನಡೆದಿದೆ. ಇದರಲ್ಲಿ 1 ಸಾವಿರ ಮಂದಿ ಕುಳಿತುಕೊಳ್ಳಬಹುದಾಗಿದೆ. ಮದುವೆ ಹಾಗೂ ಇನ್ನಿತರ ಶುಭ ಕಾರ್ಯಕ್ರಮಗಳಿಗೆ ಅತ್ಯಂತ ಕನಿಷ್ಠ ದರದಲ್ಲಿ ಸಭಾಭವನ ಬಾಡಿಗೆಗೆ ನೀಡಲಾಗುವುದು. ಕ್ಲಿನಿಂಗ್, ಲೈಟಿಂಗ್ಸ್ ಸೇರಿದಂತೆ ಇತರೇ ಕನಿಷ್ಠ ನಿರ್ವಹಣಾ ವೆಚ್ಚ ಮಾತ್ರ ನಿಗದಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಊರಿನ, ಪರವೂರಿನ ಭಕ್ತರು ಬರಬೇಕೆಂಬ ಉದ್ದೇಶದಲ್ಲಿ ಈ ಕ್ರಮ ಕೈಗೊಂಡಿದ್ದೇವೆ. ಭಕ್ತರು ಸಭಾಭವನದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಹೇಳಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಬಡೆಕ್ಕಿಲ್ಲಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಜಿತ್‌ಕುಮಾರ್ ಪಾಲೇರಿ, ಪ್ರಧಾನ ಕಾರ್ಯದರ್ಶಿ ಜನಾರ್ದನ ಗೌಡ ಬರಮೇಲು, ಕೋಶಾಧಿಕಾರಿ ರಮೇಶ್ ಬಿ.ಜಿ., ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ಗೌಡ ಪೆರ್ಲ, ಅಧ್ಯಕ್ಷ ಪ್ರತಾಪ್‌ಚಂದ್ರ ರೈ ಕುದುಮಾರುಗುತ್ತು, ಕಾರ್ಯದರ್ಶಿರಜತ್ ಕುಮಾರ್ ಶಾಂತಿಮಾರು, ಸಂಚಾಲಕ ಯಶೋಧರ ಕರ್ಕೇರ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಡಾ.ರಾಮಕೃಷ್ಣ ಭಟ್ ಅಂಜರ, ಯೋಗೀಶ್ವರಿ ಡೆಂಬಲೆ, ಪ್ರಶಾಂತ ರೈ ಅರಂತಬೈಲು, ರಮೇಶ ಗೌಡ ಪೆರ್ಲ, ಶ್ರೀ ಷಣ್ಮುಖ ದೇವಸ್ಥಾನದ ಟ್ರಸ್ಟ್‌ನ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸಹ ಸಂಚಾಲಕರು, ಸದಸ್ಯರು, ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here