ಸುಳ್ಯ ಕೆ.ವಿ.ಜಿ ಪಾಲಿಟೆಕ್ನಿಕ್ : ಶಾಶ್ವತ್‌ರಿಗೆ ರಾಜ್ಯ ಮಟ್ಟದ 3 ನೇ ರ್‍ಯಾಂಕ್

0

 

ಕೆ.ವಿ.ಜಿ.ಪಾಲಿಟೆಕ್ನಿಕ್ ಕುರುಂಜಿಭಾಗ್ ಸುಳ್ಯ ಇದರ ಕಂಪ್ಯೂಟರ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಶಾಶ್ವತ್ ಇವರು ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ೩ನೇ ರ್‍ಯಾಂಕ್ ಪಡೆದಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನ. ೦2 ರಂದು ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ ಘಟಿಕೋತ್ಸವ ೨೦೨೨ ಸಮಾರಂಭದಲ್ಲಿ, ಕಾಲೇಜ್ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಪ್ರದೀಪ್ ರವರು ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ ನಾರಾಯಣ ಸಿ.ಎನ್ ರವರ ಸಮ್ಮುಖದಲ್ಲಿ ಪದಕ ಮತ್ತು ಪ್ರಮಾಣ ಪತ್ರ ಪ್ರದಾನ ಮಾಡಿದರು.

ವಿದ್ಯಾರ್ಥಿಯ ಈ ಸಾಧನೆಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ|ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕರಾದ ಡಾ|ಜ್ಯೋತಿ ಆರ್ ಪ್ರಸಾದ್, ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಉಜ್ವಲ್ ಊರುಬೈಲು, ಕೆ.ವಿ.ಜಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ ಮತ್ತು ಸಿಬ್ಬಂದಿ ವರ್ಗದವರು ಶಾಶ್ವತ್ ರವರ ಸಾಧನೆಯನ್ನು ಅಭಿನಂದಿಸಿ, ಗೌರವಿಸಿ , ಅಭಿನಂದಿಸಿದರು.

LEAVE A REPLY

Please enter your comment!
Please enter your name here