ನ.08 , 09 : ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ

0

 

ದ.ಕ.ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕ್ರೀಡಾಕೂಟವು ನ.08 ಮತ್ತು ನ.09 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಉದ್ಘಾಟಿಸಲಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ತಹಶೀಲ್ದಾರ್ ಅನಿತಾಲಕ್ಷ್ಮೀ, ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ಬೆಂಗಳೂರು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್, ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಜ್ಞಾನಗಂಗಾ ಪಬ್ಲಿಕ್ ಸ್ಕೂಲ್ ಸಂಚಾಲಕ ಉಮೇಶ್ ಎಂ.ಪಿ, ಬೆಳ್ಳಾರೆ ಕನ್ಟ್ರಕ್ಷನ್ ಸಿವಿಲ್ ಇಂಜಿನಿಯರ್ ಹಾಜಿ ಕೆ.ಮಹಮ್ಮದ್ ಉಪಸ್ಥಿತರಿರುವರು.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು ಅಧ್ಯಕ್ಷತೆ ವಹಿಸಲಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಬಹುಮಾನ ವಿತರಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ರೈ ಚಾವಡಿಬಾಗಿಲು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ , ಕೆ.ಪಿ.ಎಸ್.ಬೆಳ್ಳಾರೆ ನಿವೃತ್ತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here