ನ.09 : ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ

0

 

ಕ್ಯಾಂಪ್ಕೋ ಸಹಭಾಗಿತ್ವದೊಂದಿಗೆ ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರ ಉದ್ಘಾಟನೆ

ಹಾಗೂ ಸದಸ್ಯ ಬೆಳೆಗಾರರ ಸಭೆ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕ್ಯಾಂಪ್ಕೋ ಸಹಭಾಗಿತ್ವದೊಂದಿಗೆ ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರ ಉದ್ಘಾಟನೆ ಹಾಗೂ ಸದಸ್ಯ ಬೆಳೆಗಾರರ ಸಭೆಯು ನ.09 ರಂದು ನಡೆಯಲಿದೆ.
ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿರುವರು ಎಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here