ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಸಭೆ

0

 

 

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆಗೆ ಸಂಬಂಧಿಸಿದಂತೆ ವಿಶೇಷ ಸಭೆ ನ‌. 6ರಂದು ದೇವಸ್ಥಾನದ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪುರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿಯನ್ನು ರಚಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮಿತಿಯ ಸದಸ್ಯ ಚಂದ್ರಶೇಖರ ಪನ್ನೆ ಸ್ವಾಗತಿಸಿದರು. ವಸಂತ್ ಉಲ್ಲಾಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here