ವಿಟ್ಲ: ಅನಂತಾಡಿ ಗ್ರಾಮದ ಬಲ್ಲಮೂಲೆ ಎಂಬಲ್ಲಿದ್ದ ಜೋಡಿಯೊಂದನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.28ರಂದು ನಡೆದ ಬಗ್ಗೆ ವರದಿಯಾಗಿದೆ. ಅನಂತಾಡಿ ಸಮೀಪದ ಬಲ್ಲಮೂಲೆ ಎಂಬಲ್ಲಿ ಜೋಡಿಯೊಂದು ಇರುವ ಬಗ್ಗೆ ಮಾಹಿತಿ ಅರಿತ ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಕೂಡಲೇ ಸ್ಥಳಕ್ಕಾಗಮಿಸಿ ಪೊಲೀಸರು ಜೋಡಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದು, ಜೋಡಿ ಒಂದೇ ಧರ್ಮಕ್ಕೆ ಸೇರಿದವರೆಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.