ಎಸ್‌ಎಸ್‌ಎಲ್‌ಸಿ ಪರೀಕ್ಷೆ- ಪ್ರಥಮ ದಿನ ಪುತ್ತೂರು, ಕಡಬದ 67 ವಿದ್ಯಾರ್ಥಿಗಳು ಗೈರು

0

ಪುತ್ತೂರು:2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾ.28ರಿಂದ ಪ್ರಾರಂಭಗೊಂಡಿದ್ದು ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ 14 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಪ್ರಥಮ ದಿನದ ಪ್ರಥಮ ಭಾಷಾ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂaಕಿನಲ್ಲಿ ಒಟ್ಟು 67 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.

ಕೊಂಬೆಟ್ಟು ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ-2 ವಿದ್ಯಾರ್ಥಿಗಳು, ಉಪ್ಪಿನಂಗಡಿ ಸ.ಪ.ಪೂ ಕಾಲೇಜಿನ ಪ್ರೌಢಶಾಲೆ-3, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ-1, ಕಡಬ ಸ.ಪ.ಪೂ ಕಾಲೇಜಿನ ಪ್ರೌಢಶಾಲೆ-7, ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ-1, ಕುಂಬ್ರ ಕೆಪಿಎಸ್ ಸ್ಕೂಲ್-3, ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ-8, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ-3 ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ ಶಾಲೆ-2 ಹಾಗೂ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಕೇಂದ್ರದಲ್ಲಿ 36 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಉಳಿದಂತೆ ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆ, ಸವಣೂರು ವಿದ್ಯಾರಶ್ಮಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೇ.100 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.

ವಾರ್ಷಿಕ ಪರೀಕ್ಷೆಯ ಬೆಳಿಗ್ಗೆ 10.45 ಕ್ಕೆ ಪ್ರಾರಂಭಗೊಂಡಿದೆ. ಪರೀಕ್ಷಾ ಕೇಂದ್ರಗಳ ಪರಿಸರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಸಿಬಂದಿಗಳು ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಸ್ಯಾನಿಟೈಸರ್ ನೀಡಿದ ಬಳಿಕ ಕೇಂದ್ರದ ಒಳಗಡೆ ಕಳುಹಿಸಲಾಗುತ್ತಿತ್ತು. ಕೋವಿಡ್ -೧೯ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳು ಗುಂಪು ಸೇರುವುದನ್ನು ತಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ನೇರವಾಗಿ ಕೊಠಡಿಯ ಒಳಗೆ ಕಳುಹಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹಾಗೂ ಶಿಕ್ಷಣ ಇಲಾಖೆಯಿಂದ ನೇಮಿಸಲ್ಪಟ್ಟ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಇತರ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು.

LEAVE A REPLY

Please enter your comment!
Please enter your name here