ರಾಮಕುಂಜ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಎಂಡೋಪೀಡಿತ ವಿದ್ಯಾರ್ಥಿಗಳಿಗೆ ಪರೀಕ್ಷೆ

0

ರಾಮಕುಂಜ: ಕಡಬ ತಾಲೂಕಿನ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ತೆರೆಯಲಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉಪಕೇಂದ್ರದಲ್ಲಿ ಐವರು ಎಂಡೋಪೀಡಿತ ವಿದ್ಯಾರ್ಥಿಗಳು ತಮ್ಮ ಸಹಾಯಕರ ಸಹಾಯದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ.


ಎಂಡೋ ಪೀಡಿತ ವಿದ್ಯಾರ್ಥಿಗಳಿಗೆ ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿದ್ದರೂ ರಾಮಕುಂಜ ಸೇವಾ ಭಾರತಿ ವಿದ್ಯಾಚೇತನ ಶಾಲೆಯ ಐವರು ವಿದ್ಯಾರ್ಥಿಗಳಿಗೆ ಪುತ್ತೂರಿಗೆ ಹೋಗಿ ಪರೀಕ್ಷೆ ಬರೆಯಲು ಕಷ್ಟವಿದ್ದ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಶಿಕ್ಷಕಿ ಶಶಿಕಲಾರವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.,ಹಾಗೂ ಡಿಡಿಪಿಐ ಸುಧಾಕರ ಕೆ.,ರವರ ಸೂಚನೆಯಂತೆ ರಾಮಕುಂಜ ಪದವಿ ಕಾಲೇಜಿನಲ್ಲಿ ಉಪಕೇಂದ್ರ ತೆರೆಯಲಾಗಿತ್ತು. ಎಂಡೋ ಪೀಡಿತ ವಿದ್ಯಾರ್ಥಿಗಳಾದ ಸುರೇಶ್, ಮೋಹನ್, ವಿಜೇಶ್, ಪದ್ಮಶೇಖರ ಹಾಗೂ ರಂಶಿದ್‌ರವರು ತಮ್ಮ ಸಹಾಯಕರ ಸಹಾಯದಿಂದ ಈ ಉಪಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ.

LEAVE A REPLY

Please enter your comment!
Please enter your name here