ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಪ್ರದಾನ ಮುಟ್ಟಾಳೆ ಧರಿಸಿಕೊಂಡೇ ಪ್ರಶಸ್ತಿ ಸ್ವೀಕರಿಸಿದ ಆಧುನಿಕ ಭಗೀರಥ

0

ವಿಟ್ಲ: ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡಿದ್ದ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ರವರು ಮಾ.28ರಂದು ನವದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಆಧುನಿಕ ಭಗೀರಥನೆಂದೇ ಕರೆಸಿಕೊಳ್ಳುತ್ತಿರುವ ಸಾಧಕ ಕೃಷಿಕ ಮಹಾಲಿಂಗ ನಾಯ್ಕರವರು ಮುಟ್ಟಾಳೆ ಧರಿಸಿಕೊಂಡೇ ಪ್ರಶಸ್ತಿ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿಯಾಗಿರುವ ಮಹಾಲಿಂಗ ನಾಯ್ಕ ಅವರು ತನಗೆ 40 ವರ್ಷಗಳ ಹಿಂದೆ ದೊರೆತ ಜಮೀನಿನಲ್ಲಿ ಏಕಾಂಗಿಯಾಗಿ ಸುರಂಗಗಳನ್ನು ತೋಡಿ ನೀರಿನ ಚಿಲುಮೆ ಉಕ್ಕಿಸಿ, ಬರಡು ಭೂಮಿಯಲ್ಲಿ ಕೃಷಿ ಮಾಡಿದವರು. ವಿದ್ಯುತ್ ರಹಿತವಾಗಿ ತೋಟಕ್ಕೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ವ್ಯವಸ್ಥೆ ಅಳವಡಿಸಿ ಅದರಲ್ಲೂ ಸೈ ಎನಿಸಿಕೊಂಡಿದ್ದರು. ಇವರ ಸಾಧನೆಯನ್ನು ಗುರುತಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

LEAVE A REPLY

Please enter your comment!
Please enter your name here