ವಿಟ್ಲ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ-ಐವರು ವಶಕ್ಕೆ

0

ವಿಟ್ಲ: ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು ಐದು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕೇಪು ಗ್ರಾಮದ ಕುದ್ದುಪದವು ಏರಟೆಲ್ ಟವರ್ ಬಳಿ ನಡೆದಿದೆ. ಕೆಪಿ ಹನೀಫ್, ಅಬೂಬಕ್ಕರ್ ಸಿದ್ದೀಕ್, ಸಿರಾಜುದ್ದೀನ್, ಮುನೀರ್ ಕೆ.ಎಂ, ಮಹಮ್ಮದ್ ಇಬ್ರಾಹಿಂ ಪೊಲೀಸರ ವಶವಾದ ಆರೋಪಿಗಳು. ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಎಲೆಗಳಿಂದ ಜುಗಾರಿ ಅಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಜುಗಾರಿ ಆಟಕ್ಕೆ ಉಪಯೋಗಿಸಿದ ೫೧೫೦ ರೂಪಾಯಿ ಹಾಗೂ ಆಟಕ್ಕೆ ಬಳಸಿದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here