ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಎನ್‌ಸಿಆರ್‌ಎಂಪಿ ಯೋಜನಾ ನಿರ್ದೇಶಕರಾಗಿ ಹರ್ಷಗುಪ್ತಾ

0

ಪುತ್ತೂರು:ಈ ಹಿಂದೆ ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಜನಮನ್ನಣೆಗಳಿಸಿದ್ದ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತಾ ಅವರು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಧೀನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಷ್ಟ್ರೀಯ ಚಂಡಮಾರುತ ಅಪಾಯ ತಗ್ಗಿಸುವ ಯೋಜನೆ(ಎನ್‌ಸಿಆರ್‌ಎಂಪಿ)ಯ ಯೋಜನಾ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. 1997ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಹರ್ಷ ಗುಪ್ತಾ ಅವರು ಈ ಮೊದಲು ಪುತ್ತೂರು ಉಪವಿಭಾಗಾಧಿಕಾರಿಯಾಗಿ, ದ.ಕ.ಜಿಲ್ಲಾಧಿಕಾರಿಯಾಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.ಪುತ್ತೂರು ಉಪವಿಭಾಗಾಧಿಕಾರಿಯಾಗಿದ್ದ ಸಂದರ್ಭ ಇಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡಿದ್ದರು.ಓರ್ವ ಉತ್ತಮ ಅಧಿಕಾರಿಯಾಗಿ ಜನಪ್ರಿಯರಾಗಿರುವ ಇವರು ತನ್ನ ಉತ್ತಮ , ಪ್ರಾಮಾಣಿಕ ಕೆಲಸಗಳಿಗಾಗಿ ಹಲವು ಬಾರಿ ವರ್ಗಾವಣೆಗೊಂಡಿದ್ದರು, ಇದೀಗ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಪ್ರಮುಖ ಹುದ್ದೆಯೊಂದಕ್ಕೆ ನೇಮಕಗೊಂಡಿದ್ದಾರೆ.

LEAVE A REPLY

Please enter your comment!
Please enter your name here