ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಭೇಟಿ

0

 

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಅವರು ಮಾ.30ರಂದು ಭೇಟಿ ನೀಡಿದರು.

ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ‌ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸಮಿತಿ ಸದಸ್ಯರು ಮತ್ತು ಶ್ತೀಕ್ಷೇತ್ರ ಧರ್ಮಸ್ಥಳದ ಜಯರಾಮ ನೆಲ್ಲಿತ್ತಾಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

 

 

 

 

LEAVE A REPLY

Please enter your comment!
Please enter your name here