ಪೆರುವಾಯಿ: ಅಕ್ರಮವಾಗಿ ಜಾನುವಾರು ಸಾಗಾಟ-ದೂರು

0

ವಿಟ್ಲ: ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ನಿಲ್ಲಿಸಿದ ವೇಳೆ ದನ ಹಾಗೂ ಕರುವನ್ನು ರಸ್ತೆಬದಿಯಲ್ಲಿ ಇಳಿಸಿ ವಾಹನ ಸವಾರ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಕಡೆಂಗೋಡ್ಲು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

 

ಈ ಬಗ್ಗೆ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸತೀಶ್ ಎಂಬವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ನಾನು ಪೆರುವಾಯಿ ಗ್ರಾಮದ ಕಡೆಂಗೋಡ್ಲು ಎಂಬಲ್ಲಿ ನಿಂತಿದ್ದ ವೇಳೆ ಕುದ್ದುಪದವು ಕಡೆಯಿಂದ ಮುರುವ ಕಡೆಗೆ ಕೆಎಲ್-14 -ಎಸ್ -1943 ನಂಬರಿನ ಪಿಕ್ ಅಪ್ ವಾಹನವೊಂದು ಬಂದಿದ್ದು, ಅದನ್ನು ಕಂಡ ನಾನು ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದಾಗ, ಮಂದಕ್ಕೆ ಹೋಗಿ ವಾಹನ ನಿಲ್ಲಿಸಿ ವಾಹನದಿಂದ ಜಾನುವಾರುಗಳನ್ನು ರಸ್ತೆ ಬದಿಯಲ್ಲಿ ಇಳಿಸಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸತೀಶ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here