ಏ.3:ರಾಜ್ಯ ಸರಕಾರಿ ನೌಕರರ ದಿನಾಚರಣೆ ಪ್ರಯುಕ್ತ ತಾಲೂಕು ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

0

ಪುತ್ತೂರು:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು ಇದರ ಪುತ್ತೂರು ತಾಲೂಕು ಶಾಖೆಯ ರಾಜ್ಯ ಸರಕಾರಿ ನೌಕರರ ದಿನಾಚರಣೆ ಪ್ರಯುಕ್ತ ಪುತ್ತೂರು ತಾಲೂಕು ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ-೨೦೨೧-೨೨ ಏ.೪ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜರಗಲಿದೆ.

ಪುತ್ತೂರು ತಹಶೀಲ್ದಾರ್ ರಮೇಶ್ ಬಾಬುರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿರವರು ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು ಇದರ ಪುತ್ತೂರು ತಾಲೂಕು ಶಾಖೆಯ ಅಧ್ಯಕ್ಷ ಶಿವಾನಂದ ಆಚಾರ್ಯರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಜಿ.ಎಂ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಉಪಸ್ಥಿತಿಯಾಗಿ ತಾಲೂಕು ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ, ಕೋಶಾಧಿಕಾರಿ ನಾಗೇಶ್ ಕೆ, ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿರವರು ಭಾಗವಹಿಸಲಿದ್ದಾರೆ.

ಸ್ಪರ್ಧಾ ವಿಭಾಗಗಳು, ವಿವರ:
೪೫ ವರ್ಷ ಕೆಳಗಿನ ಹಾಗೂ ಮೇಲ್ಪಟ್ಟ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ೧೦೦ಮೀ, ೨೦೦ಮೀ, ೪೦೦ಮೀ ಓಟ, ಗುಂಡೆಸತ, ಉದ್ದ ಜಿಗಿತ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಕ್ರೀಡಾ ಕೋಟಾದಡಿ ಆಯ್ಕೆಯಾದ ನೌಕರರ ವಿಭಾಗದ ಪುರುಷರಿಗೆ ಮತ್ತು ಮಹಿಳೆಯರಿಗೆ ಶಟಲ್ ಬ್ಯಾಡ್ಮಿಂಟನ್(ಡಬಲ್ಸ್) ಸ್ಪರ್ಧೆ ಜರಗಲಿದೆ. ಗುಂಪಾಟಗಳಲ್ಲಿ ಪುರುಷರ ವಿಭಾಗದಲ್ಲಿ(ವಯೋಮಿತಿಯ ನಿರ್ಬಂಧ ಇರುವುದಿಲ್ಲ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಕೂಟದಲ್ಲಿ ಆಯ್ಕೆಯಾದ ನೌಕರರನ್ನು ಹೊರತುಪಡಿಸಿ) ವಾಲಿಬಾಲ್ ಪಂದ್ಯಾಟ, ಮಹಿಳೆಯರ ವಿಭಾಗದಲ್ಲಿ(ವಯೋಮಿತಿಯ ನಿರ್ಬಂಧ ಇರುವುದಿಲ್ಲ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಕೂಟದಲ್ಲಿ ಆಯ್ಕೆಯಾದ ನೌಕರರನ್ನು ಹೊರತುಪಡಿಸಿ) ತ್ರೋಬಾಲ್ ಪಂದ್ಯಾಟ ಮತ್ತು ಎಲ್ಲಾ ನೌಕರರಿಗೆ ಮುಕ್ತ ಅವಕಾಶ/ಪುರುಷ ಮತ್ತು ಮಹಿಳೆ ಎಂಬ ಪ್ರತ್ಯೇಕ ವಿಭಾಗಳಿಲ್ಲದ ಕನ್ನಡ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ‘ಸಾಂಸ್ಕೃತಿಕ ಸ್ಪರ್ಧೆ’ಯು ಜರಗಲಿದೆ.

ಷರತ್ತುಗಳು:
ಕ್ರೀಡಾಸ್ಪರ್ಧೆಯಲ್ಲಿ ಓರ್ವ ಸ್ಪರ್ಧಿಗೆ ಗರಿಷ್ಟ ೩ ಸ್ಪರ್ಧೆಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶ, ಸ್ಪರ್ಧಿಗಳು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು. ಗುಂಪಾಟವನ್ನು ಹೊರತುಪಡಿಸಿ ಉಳಿದ ಯಾವುದೇ ಸ್ಪರ್ಧೆಗಳಿಗೆ ಸ್ಥಳದಲ್ಲಿ ನೋಂದಾಯಿಸಲು ಅವಕಾಶವಿಲ್ಲ. ಸ್ಪರ್ಧಿಗಳು ಸಂಘದಿಂದ ನೀಡಲಾಗುವ ಗೂಗಲ್ ಫಾರ್ಮ್‌ನಲ್ಲಿಯೇ ನೋಂದಾವಣೆಯನ್ನು ಮಾಡಿಕೊಳ್ಳತಕ್ಕದ್ದು. ಪುತ್ತೂರು ತಾಲೂಕಿನ ಸರಕಾರಿ ನೌಕರರಿಗೆ ಮಾತ್ರ ಭಾಗವಹಿಸಲು ಅವಕಾಶ. ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಕ್ರೀಡಾಕೂಟದಲ್ಲಿ ಆಯ್ಕೆಯಾದ ನೌಕರರ ವಿಭಾಗದಲ್ಲಿ ಇತರ ಸರಕಾರಿ ನೌಕರರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಕ್ರೀಡಾಕೂಟದಲ್ಲಿ ಆಯ್ಕೆಯಾದ ನೌಕರರು ತಮಗೆ ನಿಗದಿಪಡಿಸಲಾದ ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಗುಂಪಾಟದಲ್ಲಿ ಭಾಗವಹಿಸಲು ಅವಕಾಸವಿರುವುದಿಲ್ಲ. ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ಏ.೨೧ ರಂದು ಸರಕಾರಿ ನೌಕರರ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಉಪಾಧ್ಯಕ್ಷ ರಾಮಚಂದ್ರ ಭಟ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here