ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರೆ-ಮಹಾರಥೋತ್ಸವ

0


ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರೆಯ ಮಹಾರಥೋತ್ಸವ ಎ.1ರಂದು ರಾತ್ರಿ ನಡೆಯಿತು.


ಮಾ.೨೯ರಂದು ರಾತ್ರಿ ಧ್ವಜಾರೋಹಣದೊಂದಿಗೆ ಜಾತ್ರೋತ್ಸವ ಆರಂಭಗೊಂಡಿದ್ದು ಎ.೧ರಂದು ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ ನಡೆಯಿತು. ರಾತ್ರಿ ಬಲಿ ಹೊರಟು ಉತ್ಸವ, ರಕ್ತೇಶ್ವರಿ ಮತ್ತು ಹುಲಿ ದೈವಗಳ ನುಡಿಕಟ್ಟುಗಳು ನಡೆದು ರಾತ್ರಿ ದೇವರ ಮಹಾರಥೋತ್ಸವ ನಡೆಯಿತು. ನಂತರ ಅಶ್ವತ್ಥ ಕಟ್ಟೆಪೂಜೆಗಳು ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲಾಯರವರು ಪೂಜಾ ವಿಧಿವಿಧಾನಗಳಲ್ಲಿ ಸಹಕರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಉತ್ಸವ ಸಮಿತಿ ಅಧ್ಯಕ್ಷ ಪಾಂಡೇಲುಗುತ್ತು ಚಂದ್ರಹಾಸ ರೈ ಬುಡಲೂರು, ಪ್ರಧಾನ ಕಾರ್ಯದರ್ಶಿ ವಿನೋದ್‌ಕುಮಾರ್ ಪಲ್ಲಡ್ಕ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಪ್ರಧಾನ ಕಾರ್ಯದರ್ಶಿ ಚೇತನ್ ಆನೆಗುಂಡಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ದೇವಗಿರಿ ಬಾಲಗೋಕುಲದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೂಲ್ಕಿ ದ.ಕ. ಇವರಿಂದ ’ಬಂಗಾರ್ ಬಾಲೆ’ಯಕ್ಷಗಾನ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here