ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ನಿಡ್ಪಳ್ಳಿ;ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2021-22 ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿರುತ್ತದೆ.

 

ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಲೋಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 6 ಮಂದಿ ವಿದ್ಯಾರ್ಥಿಗಳಲ್ಲಿ ಒಬ್ಬಳು ವಿದ್ಯಾರ್ಥಿನಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉಳಿದ 5 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ನೂರು ಶೇಕಡ ಫಲಿತಾಂಶ ಲಭಿಸಿರುತ್ತದೆ ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಚಿತ್ರಕಲಾ ಶಿಕ್ಷಕಿ ಶಾರದಾ ಜಿ ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here