ಉಪ್ಪಿನಂಗಡಿ : ಇನೋವಾ ಕಾರೊಂದು ಅಟೋ ರಿಕ್ಷಾ ಹಾಗೂ ಬೈಕಿಗೆ ಡಿಕ್ಕಿ ಹೊಡೆದ ಘಟನೆ ಎ.2ರಂದು ಉಪ್ಪಿನಂಗಡಿಯ ಗುರುಸುಧೀಂದ್ರ ಕಲ್ಯಾಣ ಮಂಟಪದ ಎದುರಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೆಕ್ಕಿಲಾಡಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಇನ್ನೂಂದು ವಾಹನವನ್ನು ಒವರ್ಟೇಕ್ ಮಾಡುವ ಭರದಲ್ಲಿ ಬಿಸಿರೋಡ್ನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ರಿಕ್ಷಾದ ಹಿಂಬಂದಿಯಲ್ಲಿ ಬರುತ್ತಿದ್ದ ಬೈಕಿಗೂ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಆಟೋ ರಿಕ್ಷಾ ಮೂರು ಪಲ್ಟಿ ಹೊಡೆದು ಹಳೆಯ ರಾಷ್ಟ್ರೀಯ ಹೆದ್ದಾರಿ ಬಳಿ ಉರುಳಿ ಬದ್ದಿದೆ. ರಿಕ್ಷಾ ಚಾಲಕ ಸಹಿತ ಪ್ರಯಾಣಿಕರು ಆಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲಿಸಿದ್ದಾರೆ.