![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ.31 ಮತ್ತು ಎ.1ರಂದು ವೂಲೆನ್ ಕ್ರಾಫ್ಟ್ ತರಬೇತಿ ಕಾರ್ಯಾಗಾರ ನಡೆಯಿತು.
ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ, ಮಹಿಳಾ ಸೊಸೈಟಿ ನಿರ್ದೇಶಕಿ, ವೂಲೆನ್ ಕ್ರಾಫ್ಟ್ ಟೈಲರಿಂಗ್ ಪರಿಣಿತರಾದ ಸುಜಾತ ಗಣೇಶ್ರವರು ಕಾರ್ಯಾಗಾರ ನಡೆಸಿಕೊಟ್ಟರು. ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶ ಈ ಕಾರ್ಯಾಗಾರದಾಗಿತ್ತು. ಸುಮಾರು 6೦ ವಿದ್ಯಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.