ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

0


ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಾರ್ಚ್ 31ರಂದು ಏಳು ದಿನಗಳ ಬೇಸಿಗೆ ಶಿಬಿರವನ್ನು ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀಯುತ ಯು.ಜಿ.ರಾಧಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಈ ಶಿಬಿರದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳು ಅದರ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ವೀಣಾ ಪ್ರಸಾದ್ ಹಾಗೂ ಶಿಕ್ಷಕ – ಶಿಕ್ಷಕರ ವೃಂದದವರು ಉಪಸ್ಥಿತರಿದ್ದರು . ೯ನೇ ತರಗತಿಯ ವಿದ್ಯಾರ್ಥಿನಿ ಆಧಿತಿ ಭಂಡಾರಿ ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿ,ವಂದಿಸಿದರು.

LEAVE A REPLY

Please enter your comment!
Please enter your name here