ಕಾಣಿಯೂರು ಉಜ್ವಲ ಸಂಜೀವಿನಿ ಒಕ್ಕೂಟದ ಪದಗ್ರಹಣ, ವಾರ್ಷಿಕ ಮಹಾಸಭೆ

0


ಕಾಣಿಯೂರು: ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕಾಣಿಯೂರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕೇಂದ್ರ ಸರಕಾರದ ಧೀನದಯಾಳ್ ಯೋಜನೆಯಡಿಯಲ್ಲಿ ಕಾಣಿಯೂರು ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಮತ್ತು ವಾರ್ಷಿಕ ಮಹಾಸಭೆಯು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾಣಿಯೂರು ಪ್ರಧಾನ ಕಛೇರಿಯ ಸಭಾಭವನದಲ್ಲಿ ನಡೆಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಜಗತ್ ಕಜೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಚಿತ್ರಾ ಕಟ್ಟತ್ತಾರು ವಹಿಸಿದ್ದರು. ಕಾಣಿಯೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಮಲ್‌ರಾಜ್, ಗ್ರಾ.ಪಂ.ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ ಪೆರ್ಲೋಡಿ, ಅಂಬಾಕ್ಷಿ ಕೂರೇಲು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ಒಕ್ಕೂಟದ ಉಪಾಧ್ಯಕ್ಷೆ ಅರುಣ ಎಂ. ಶೆಟ್ಟಿ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿ ಸುಗಂಧಿ ವಾರ್ಷಿಕ ವರದಿ ವಾಚಿಸಿದರು. ಸುಮಿತ್ರಾ ಬಂಡಾಜೆ ಸ್ವಾಗತಿಸಿ, ಎಲ್‌ಸಿಆರ್‌ಪಿ ಪಾರ್ವತಿ ವಂದಿಸಿದರು. ಎಂ.ಬಿ.ಕೆ ಸುಮನ ಪುಣ್ಚತ್ತಾರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here