ಫಿಲೋಮಿನಾ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ,ಸವಣೂರು ಗ್ರಾ. ಪಂ.ನಿಂದ ಸ್ವಚ್ಛತಾ ಸಪ್ತಾಹ

0

ಪುತ್ತೂರು:- ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಹಾಗೂ ಗ್ರಾಮ ಪಂಚಾಯತಿ ಸವಣೂರು ಇವರ ಜಂಟಿ ಸಹಯೋಗದಲ್ಲಿ ಮಾ.5 ರಂದು ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸವಣೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ರಸ್ತೆಯ ಬದಿಯಲ್ಲಿರುವ ಕಸವನ್ನು ಸ್ವಚ್ಛ ಮಾಡುವ ಮೂಲಕ ಜನರಿಗೆ ಕಸ ನಿರ್ವಹಣೆಯ ಅರಿವು ನೀಡಲಾಯಿತು. ಗ್ರಾಮ ಪಂಚಾಯತಿ ಸವಣೂರು ಇವರು ಹಾಗೂ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಕಸವನ್ನು ಹೆಕ್ಕುವ ಮೂಲಕ ಜನರಿಗೆ ಮಾದರಿಯಾದರು.

 


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಮಾಹಿತಿಯುಳ್ಳ ಕರಪತ್ರವನ್ನು ಅಂಗಡಿ ವ್ಯಾಪಾರಿಗಳಿಗೆ ಹಾಗೂ ಸ್ಥಳೀಯರಿಗೆ ವಿತರಿಸಿದರು.

ಸವಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ರವರು, ಪರಿಸರ ಸ್ವಚ್ಛತೆ ಜೀವನದಲ್ಲಿ ಮುಖ್ಯ ಪಾತ್ರವೆಂದು ಹೇಳಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಶೆಟ್ಟಿರವರು ವಂದಿಸಿದರು. ಸವಣೂರು ಗ್ರಾ. ಪಂ ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಸವಣೂರು ಗ್ರಾ. ಪಂ ಸದಸ್ಯರು ಹಾಗೂ ಸಿಬ್ಬಂದಿಗಳು, ಸ್ಥಳೀಯರು ಹಾಗೂ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಫಿಲೋಮಿನಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಕೌಶಿಕ, ಮಧುರ, ಶಶಾಂಕ್, ಮನಸ್ವಿ ಇವರ ನೇತೃತ್ವದಲ್ಲಿ ಇತರ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here