ಕುಕ್ಕೆಗೆ ಸ್ಯಾಂಡಲ್ ವುಡ್ ನಟ ಯಶ್ ಭೇಟಿ

0

 

ಪುತ್ತೂರು:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಇಂದು ಬೇಟಿ ನೀಡಿದರು. ಶೀಘ್ರದಲ್ಲಿ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರತಂಡದ ಜತೆಯಲ್ಲಿ ಯಶ್ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಮತ್ತಿತರರು ಚಿತ್ರತಂಡವನ್ನು ಸ್ವಾಗತಿಸಿದರು. ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ, ಶಿಷ್ಟಾಚಾರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here