![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2022/04/IMG-20220411-WA0027.jpg)
ಬೆಟ್ಟಂಪಾಡಿ ಗ್ರಾಮ ಪಂಚಾಯತಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದುಡಿಯೋಣ ಬಾ ಅಭಿಯಾನ ಮತ್ತು ಬಯಲು ಕಸ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮ ಎ.11 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರಮ.ಡಿ, ಉಪಾಧ್ಯಕ್ಷ ವಿನೋದ್ ರೈ ,ನೊಡೆಲ್ ಅಧಿಕಾರಿಯಾಗಿ ತಾಲೂಕು ಹಿರಿಯ ತೋಟಗಾರಿಕಾ ನಿರ್ದೇಶಕಿ ರೇಖಾ, ನರೇಗಾ ತಾಂತ್ರಿಕ ಸಹಾಯಕಿ ಆಕಾಂಕ್ಷ ,ಐಇಸಿ ಸಂಯೋಜಕ ಭರತ್ ರಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂದೇಶ್ ,ಕಾರ್ಯದರ್ಶಿ ಬಾಬು ನಾಯ್ಕ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.