ಮುಂಡೂರು ಶಾಲೆಯಲ್ಲಿ ವಾಲಿಬಾಲ್ ತರಬೇತಿ ಶಿಬಿರ ಉದ್ಘಾಟನೆ

0

ಪುತ್ತೂರು: ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಸನಕ್ಕೆ ಕ್ರೀಡೆಯು ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿದ್ದು, ಕೇವಲ ಅಂಕಾಧಾರಿತ ಕಲಿಕೆಗೆ ಮಾತ್ರ ಮಕ್ಕಳನ್ನು ಸೀಮಿತಗೊಳಿಸದೆ, ಕ್ರೀಡಾಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಿದರೆ ಒಂದು ಪ್ರಬುದ್ಧ ಸಮಾಜದ ನಿರ್ಮಾಣ ಸಾಧ್ಯ ಎಂದು ಅಂಬಿಕಾ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಹೇಳಿದರು.


ಮುಂಡೂರು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ 15 ದಿನ ನಡೆಯುವ ವಾಲಿಬಾಲ್ ತರಬೇತಿ ಶಿಬಿರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ವಾಲಿಬಾಲ್ ತರಬೇತಿ ಶಿಬಿರವನ್ನು ಬಾಲ್ ಟಾಸ್ ಮಾಡುವ ಮುಂಡೂರು ಗ್ರಾ.ಪಂ ಸದಸ್ಯ ಉಮೇಶ್ ಅಂಬಟ ಉದ್ಘಾಟಿಸಿದರು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರವು ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಹಾಗೂ ಸಮ್ಮರ್ ಕ್ಯಾಂಪ್ ಕನ್ವೀನಿಯರ್ ಪ್ರಸನ್ನ ಬಿ.ಕೆ ಇವರ ಸಹಕಾರದೊಂದಿಗೆ ನಡೆಯಲಿದ್ದು ಅಂಬಿಕಾ ವಿದ್ಯಾಲಯದ ದೈ.ಶಿ ನಿರ್ದೇಶಕರಾದ ನವೀನ್ ತರಬೇತಿ ನೀಡಲಿದ್ದಾರೆ. 15 ದಿನಗಳವರೆಗೆ ನಡೆಯಲಿರುವ ತರಬೇತಿ ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು ಶಾಲೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ ಎಂದು ಶಾಲಾ ದೈ.ಶಿ.ಶಿಕ್ಷಕಿ ವನಿತಾ ಬಿ ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಗುರು ರಾಮಚಂದ್ರ, ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ ಉಪಸ್ಥಿತರಿದ್ದರು
ಶಾಲಾ ಎಸ್‌ಡಿಎಂಸಿ ಸದಸ್ಯರುಗಳು, ಪೋಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಶಶಿಕಲಾ ಟಿ ವಂದಿಸಿದರು. ಶಿಕ್ಷಕ ಅಬ್ದುಲ್ ಬಶೀರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here