ನೆಲ್ಯಾಡಿ: ಬಯಲು ಕಸಮುಕ್ತ ಗ್ರಾಮ ಅಭಿಯಾನ

0


ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ ಬಯಲು ಕಸಮುಕ್ತ ಗ್ರಾಮ ಮತ್ತು ಉದ್ಯೋಗ ಖಾತರಿ ಯೋಜನೆಯ ‘ದುಡಿಯೋಣ ಬಾ ‘ಕಾರ್ಯಕ್ರಮ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ಚೇತನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೋಡೆಲ್ ಅಧಿಕಾರಿಯಾಗಿದ್ದ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿಯವರು ಮಾಹಿತಿ ನೀಡಿದರು. ಕಡಬ ತಾಲೂಕು ಪಂಚಾಯತ್‌ನ ಐಇಸಿ ಸಂಯೋಜಕ ಭರತ್‌ರವರು ಉದ್ಯೋಗ ಖಾತರಿ ಯೋಜನೆಯಿಂದ ನಡೆಸಲ್ಪಡುವ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಹಾಯಕಿ ಸವಿತಾ ಲೋಬೋರವರು ತೋಟಗಾರಿಕೆ ಇಲಾಖೆಯಿಂದ ನಡೆಸಲ್ಪಡುವ ಕಾಮಗಾರಿಗಳ ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೆಲ್ಯಾಡಿ ಗ್ರಾಮವನ್ನು ಕಸಮುಕ್ತ ಗ್ರಾಮವನ್ನಾಗಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ಪ್ರತಿ ವಾರ್ಡ್‌ಗಳಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ನಿರ್ಧರಿಸಲಾಯಿತು. ಗ್ರಾ.ಪಂ.ಸದಸ್ಯರಾದ ಜಯಾನಂದ ಬಂಟ್ರಿಯಾಲ್, ಮಹಮ್ಮದ್ ಇಕ್ಬಾಲ್, ಯಾಕೂಬ್ ಯು., ಆನಂದ ಗೌಡ ಪಿಲವೂರು, ರೇಷ್ಮಾಶಶಿ, ಅಂಗನವಾಡಿ ಮೇಲ್ವಿಚಾರಕಿ ಪುಷ್ಪಾ, ನೆಲ್ಯಾಡಿ ಜೆಸಿಐ ಅದ್ಯಕ್ಷೆ ಜಯಂತಿ ಬಿ.ಎಂ., ಕರ್ನಾಟಕ ಸರಕಾರಿ ನೌಕರರ ಸಂಘದ ಕಡಬ ತಾಲೂಕು ಅಧ್ಯಕ್ಷ ವಿಮಲ್‌ಕುಮಾರ್, ನೆಲ್ಯಾಡಿ ಶಾಲೆಯ ಮುಖ್ಯಶಿಕ್ಷಕ ಆನಂದ ಅಜಿಲ, ಅಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮಂಜುಳಾ ಎನ್.,ಸ್ವಾಗತಿಸಿದರು. ಗ್ರಾ.ಪಂ.ಸಿಬ್ಬಂದಿ ಶಿವಪ್ರಸಾದ್ ವಂದಿಸಿದರು. ಸಿಬ್ಬಂದಿಗಳಾದ ಲಲಿತಾ, ಭವ್ಯಾ, ಲೀಲಾವತಿ, ಗಿರೀಶ ಡಿ.,ಸೋಮಶೇಖರ, ಅಬ್ದುಲ್ ರಹಿಮಾನ್‌ರವರು ಸಹಕರಿಸಿದರು. ಸಭೆಯ ಬಳಿಕ ನೆಲ್ಯಾಡಿ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here