ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

0

  • ಜಿಲ್ಲೆಯಲ್ಲಿ 31,308 ವಿದ್ಯಾರ್ಥಿಗಳು, 51 ಪರೀಕ್ಷಾ ಕೇಂದ್ರ

ಮಂಗಳೂರು: ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ದ.ಕ.ಜಿಲ್ಲೆಯ 31,308 ವಿದ್ಯಾರ್ಥಿಗಳಿಗೆ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಕಾನರೆನ್ಸ್‌ನಲ್ಲಿ ಮಾತನಾಡಿದ ಅವರು, ಜಿಲ್ಲೆಯ 12 ಸರಕಾರಿ, 23 ಅನುದಾನಿತ ಹಾಗೂ 16 ಅನುದಾನರಹಿತ ಕಾಲೇಜುಗಳಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ.ಅವುಗಳಿಗೆ 14 ಮಂದಿ ರೂಟ್ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ. 15,652 ಬಾಲಕರು ಹಾಗೂ 15,656 ಬಾಲಕಿಯರ ಸಹಿತ 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಅದರಲ್ಲಿ ಕಲಾ ವಿಭಾಗದ 4,329, ವಾಣಿಜ್ಯ ವಿಭಾಗದ 14,987, ವಿಜ್ಞಾನ ವಿಭಾಗದ 11,992 ವಿದ್ಯಾರ್ಥಿಗಳಿದ್ದಾರೆ ಎಂದವರು ಮಾಹಿತಿ ನೀಡಿದರು.

ಪರೀಕ್ಷೆಯು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಝ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದರಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೆಕ್ಷನ್ 144 ಪ್ರಕಾರ ನಿಷೇಧಾe ಜಾರಿ ಮಾಡಲಾಗುವುದು ಎಂದರು.
ಎಲ್ಲಾ ತಹಶೀಲ್ದಾರರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಪೊಲೀಸರಿಂದ ಬಂದೋಬಸ್ತ್ ಒದಗಿಸಬೇಕು. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

LEAVE A REPLY

Please enter your comment!
Please enter your name here