ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0

ಪುತ್ತೂರು;ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡುವಾಗ ಕರ್ತವ್ಯಗಳನ್ನು ಯೋಚಿಸಬೇಕು. ಸಮಾಜಕ್ಕೆ ನಾನೇನು ಮಾಡಬೇಕು ಎನ್ನುವುದನ್ನು ಯೋಚಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಈ ಕುರಿತು ಯೋಚಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

 


ಬಿಜೆಪಿ ಪಕ್ಷದ ಕಚೇರಿಯಲ್ಲಿ ಎ.14ರಂದು ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 131 ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ಅಂಬೇಡ್ಕರ್ ವಿವರಿಸಿದ್ದಾರೆ. ರಾಜಕೀಯ ಪಕ್ಷಗಳು, ಸರಕಾರಗಳ ವ್ಯವಸ್ಥೆಯ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ದೇಶಕ್ಕೆ ಸರಕಾರಗಳು ಆವಶ್ಯಕವಾಗಿರುವಂತೆ ರಾಜಕೀಯ ಪಕ್ಷಗಳು ಬೇಕು ಎಂದು ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ. ದೇಶದ 130 ಕೋಟಿ ಜನರು ಅಂಬೇಡ್ಕರ್ ರವರನ್ನು ಸ್ಮರಣೆ ಮಾಡುವ ಜೊತೆಯಲ್ಲಿ ಅವರ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ದೇಶಕ್ಕೆ ಸಂವಿಧಾನ‌ ರಚಿಸಿಕೊಟ್ಟ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಗುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ವಾರ್ಡ್, ಕಾಲೋನಿಗಳಲ್ಲಿ ಆಚರಿಸಲಾಗುತ್ತಿದೆ ಎಂದರು.

ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್ಸಿ ಮೋರ್ಚಾದ ಗ್ರಾಮಾಂತರ ಮಂಡಲದ ಅಧ್ಯಕ್ಷ ಬಾಬು ಬೊಬ್ಬಮಗುಂಡಿ ಸ್ವಾಗತಿಸಿದರು. ನಗರ ಮಂಡಲದ ಅಧ್ಯಕ್ಷ ತಿಮ್ಮಪ್ಪ ನೀರ್ಪಾಜೆ ವಂದಿಸಿದರು. ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಕಾರ್ಯಕ್ರಮ ನಿರೂಪಿಸಿದರು.

ಎಸ್ಸಿ ಮೋರ್ಚಾದ ಕಾರ್ಯದರ್ಶಿ ಜನಾರ್ದನ, ಸದಸ್ಯ ಕೆ.ಕಿಟ್ಟ ಅಜಿಲ, ತಾ.ಪಂ ಮಾಜಿ ಸದಸ್ಯ ಸಂಕಪ್ಪ ಎಂ. ಕುರಿಯ, ನಗರ ಸಭಾ ಉಪಾಧ್ಯಕ್ಷೆ ವಿದ್ಯಾ ಗೌರಿ, ಸದಸ್ಯರಾದ ಶಶಿಕಲಾ ಸಿ.ಎಸ್., ದೀಕ್ಷಾ ಪೈ, ಗ್ರಾಮಾಂತರ ಮಂಡಲದ ಕಾರ್ಯದರ್ಶಿ ನಿತೀಶ್ ಶಾಂತಿವನ, ನಗರ ಮಂಡಲದ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಪ್ರಮುಖರಾದ ಜಯಂತಿ ನಾಯಕ್, ಜ್ಯೋತಿ ನಾಯಕ್, ಸುರೇಶ್ ಕಣ್ಣಾರಾಯ, ರಾಜೇಶ್ ಬನ್ನೂರು, ಶಿವಕುಮಾರ್ ಕಲ್ಲಿಮಾರ್, ಜಯಶ್ರೀ ಶೆಟ್ಟಿ, ಉಷಾಚಂದ್ರ ಮುಳಿಯ ಸೇರಿದಂತೆ ಹಲವು ಮಂದಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here