ಎ.16: ಸುಳ್ಯಪದವು ಸರ್ವೋದಯ ಪ್ರೌಢಶಾಲೆಯಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

0

  • ಎ.ಸಿ.ನೇತೃತ್ವದಲ್ಲಿ ಬಡಗನ್ನೂರು ಗ್ರಾ.ಪಂ.ನಲ್ಲಿ ಪೂರ್ವಭಾವಿ ಸಭೆ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಭಾಗಿತ್ವದಲ್ಲಿ, ‘ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ’ಕಾರ್ಯಕ್ರಮದಡಿ ದ.ಕ.ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಎ.16ರಂದು ಸುಳ್ಯಪದವು ಸರ್ವೋದಯ ಪ್ರೌಢಶಾಲೆಯಲ್ಲಿ ನಡೆಯಲಿದೆ. ಇದರ ಪೂರ್ವಭಾವಿ ಸಿದ್ಧತಾ ಸಭೆ ಎ.13ರಂದು ಬಡಗನ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿಯವರು ಅಧ್ಯಕ್ಷೆತೆ ವಹಿಸಿದ್ದರು.

 

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್‌ರವರು ಮಾತನಾಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ, ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ರಕ್ತದಾನ ಶಿಬಿರ, ಕುದ್ರೋಳಿ ಗಣೇಶ್‌ರವರಿಂದ ಜಾದೂ ಪ್ರದರ್ಶನ, ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲು ಸ್ವೀಕಾರ, ವಿವಿಧ ಸರಕಾರಿ ಇಲಾಖೆಗಳ ಮಾಹಿತಿ ಕೇಂದ್ರ, ವಸ್ತು ಪ್ರದರ್ಶನ ಹಾಗೂ ಪ್ರಾತ್ಯಕ್ಷತೆ, ಸ್ವಸಹಾಯ ಗುಂಪುಗಳಿಂದ ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ.ದ.ಕ.ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ತಹಶೀಲ್ದಾರ್ ರಮೇಶ್‌ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಬಡಗನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಆಳ್ವ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಉಪಸ್ಥಿತರಿದ್ದರು.ಕಾರ್ಯಕ್ರಮದ ಕುರಿತು ಸಲಹೆ ಸೂಚನೆ ಪಡೆದುಕೊಳ್ಳಲಾಯಿತು.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸೀಮ ಗಂಧದ ಸ್ವಾಗತಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನವೀನ್ ಭಂಡಾರಿ ವಂದಿಸಿದರು.ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ತಹಶೀಲ್ದಾರ್ ಭೇಟಿ:
ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯದ ಹಿನ್ನೆಲೆಯಲ್ಲಿ ಎ.೧೨ರಂದು ತಹಶೀಲ್ದಾರ್ ರಮೇಶ್‌ಬಾಬು ಸರ್ವೋದಯ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಮುಖ್ಯ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದರು.ಶಾಲಾ ಸಭಾಭವನದ ಲೈಟಿಂಗ್ಸ್, ಕೊಠಡಿಗಳ ಸ್ವಚ್ಛತೆ ಮುಂತಾದ ಕಾರ್ಯಗಳ ಬಗ್ಗೆ ಮುಖ್ಯ ಶಿಕ್ಷಕರು ಹಾಗೂ ಸ್ಥಳೀಯ ನಾಯಕರ ಜೊತೆ ತಹಸಿಲ್ದಾರ್ ಮಾತುಕತೆ ನಡೆಸಿದ್ದರು.ಉಪತಹಶೀಲ್ದಾರ್ ಲೋಕೇಶ್, ಕಂದಾಯ ನಿರೀಕ್ಷಕ ಗೋಪಾಲ್, ಗ್ರಾಮಕರಣಿಕ ಉಮೇಶ್ ಕಾವಡಿ, ಸರ್ವೋದಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತ್ಯಶಂಕರ ಭಟ್, ಎಸ್.ಲಕ್ಷ್ಮೀನರಸಿಂಹ ನಾಯಕ್ ಇಂದಾಜೆ, ಗಂಗಾಧರ ರೈ ಎನ್.ಜಿ., ಶೈಲೇಶ್, ರಾಜೇಶ್ ಎಂ, ಈಶ್ವರಮಂಗಲ ಹೊರಠಾಣೆಯ ಠಾಣಾಧಿಕಾರಿ ಶ್ರೀಧರ ರೈ, ಹರಿಪ್ರಸಾದ್ ಉಪಸ್ಥಿತರಿದ್ದರು. ತಾ.ಪಂ.ಸಹಾಯಕ ನಿರ್ದೇಶಕಿ ಶೈಲಜಾ ಪ್ರಕಾಶ್, ನರೇಗಾ ಎಂಜಿನಿಯರ್ ಭರತ್, ಬಡಗನ್ನೂರು ಗ್ರಾ,ಪಂ. ಪಿಡಿಒ ವಸೀಮಗಂಧ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮವಾಸ್ತವ್ಯದಲ್ಲಿ…

  • ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
  • ಕುದ್ರೋಗಿ ಗಣೇಶ್ ಜಾದೂ
  • ಇಲಾಖಾ ಮಾಹಿತಿ ಕೇಂದ್ರ,ಸಾರ್ವಜನಿಕರಿಂದ ಅಹವಾಲು ಸ್ವೀಕಾರ
  • ಸ್ವಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನ, ಮಾರಾಟ

LEAVE A REPLY

Please enter your comment!
Please enter your name here