ಬಜತ್ತೂರು: ಬಯಲು ಕಸ ಮುಕ್ತ ಗ್ರಾಮ ಅಭಿಯಾನ

0

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ , ಪುತ್ತೂರು ತಾಲೂಕು ಪಂಚಾಯತ್ ಮತ್ತು ಬಜತ್ತೂರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಬಯಲು ಕಸಮುಕ್ತ ಅಭಿಯಾನ ಕಾರ್ಯಕ್ರಮಕ್ಕೆ ಬಜತ್ತೂರು ನೀರಕಟ್ಟೆ ಅಂಗನವಾಡಿ ಕೇಂದ್ರ ಮತ್ತು ಬೆದ್ರೋಡಿಯಲ್ಲಿ ಚಾಲನೆ ನೀಡಲಾಯಿತು. ಪಂಚಾಯತ್ ಅಭಿವೃದ್ಧಿಕಾರಿ ಪ್ರವೀಣ್ , ಕಾರ್ಯದರ್ಶಿ ಗಿರಿಯಪ್ಪ ಗೌಡ, ಪಂಚಾಯತಿ ಸಿಬ್ಬಂದಿ ರಮೇಶ್ ನೇತೃತ್ವ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತರಾದ ಕಲಾವತಿ , ರವಿಕಲಾ, ಕೋಮಲಾಕ್ಷಿ, ಜೇಸಿಐ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮೋಹನ್ ಚಂದ್ರ ತೋಟದ ಮನೆ, ಕಾಂಚನ ವಿಕ್ರಮ ಯುವಕ ಮಂಡಲದ ಪೂರ್ವಾಧಕ್ಷ ಕುಶಾಲಪ್ಪ ಮುಖ್ಯ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್ , ಆಶಾ ಕಾರ್ಯಕರ್ತೆಯರು , ಆರೋಗ್ಯ ಕಾರ್ಯಕರ್ತರು, ವಿವಿಧ ಸ್ವಸಹಾಯ ಸಂಘದ ಸದಸ್ಯರು , ಜೇಸಿ ಸದಸ್ಯರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ,ವಳಾಲು ಮತ್ತು ನೀರಕಟ್ಟೆ ಸ್ಥಳಗಳಲ್ಲಿ ಪ್ಲಾಸ್ಟಿಕ್ ಕಸಕಡ್ಡಿಗಳನ್ನು ಹೆಕ್ಕಿ ಪರಿಸರವನ್ನು ಸ್ವಚ್ಛಗೊಳಿಸಿದರು.

 

LEAVE A REPLY

Please enter your comment!
Please enter your name here