“ಸರ್ವೇ ಜನಾಃ ಸುಖಿನೋ ಭವಂತು” ಸರಕಾರದ ಉದ್ದೇಶ – ಪುತ್ತೂರಿನಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

0

ಪುತ್ತೂರು: ಕರ್ನಾಟಕ ಸರ್ಕಾರದ ದ.ಕ.ಜಿ.ಪಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎ. ೧೮ರಂದು ನೆಹರೂನಗರ ಸುದಾನ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳವು ಉದ್ಘಾಟನೆಗೊಂಡಿತ್ತು. ೭೫ ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆದ ಈ ಉಚಿತ ಆರೋಗ್ಯ ಮೇಳವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ ಸರ್ವೇ ಜನಾಃ ಸುಖಿನೋ ಭವಂತು ಸರಕಾರದ ಉದ್ದೇಶ ಎಂದರು. ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಟಿ. ರಮೇಶ್ ಬಾಬು, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಎಂ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವಿನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್, ಪೌರಾಯುಕ್ತ ಮಧು ಎಸ್ ಮನೋಹರ್, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ರಾಜೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟನೆಗೆ ಮೊದಲು ಮಂಜಲ್ಪಡ್ಪು ವೃತ್ತದಿಂದ ಸುದಾನ ಶಾಲಾ ವಠಾರಕ್ಕೆ ಆರೋಗ್ಯ ಜಾಗೃತಿ ಜಾಥಾ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಮತ್ತು ತಾಲೂಕು ನೋಡೆಲ್ ಅಧಿಕಾರಿ ಡಾ. ಬದ್ರುದ್ದೀನ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

 


ಉಚಿತ ತಪಾಸಣೆ, ಔಷಧಿ ವಿತರಣೆ:
ಆರೋಗ್ಯ ಮೇಳದಲ್ಲಿ ಎಲ್ಲಾ ಕಾಯಿಲೆಗಳಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ಮತ್ತು ಔಷಧಿ ವಿತರಣೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವಿಕೆ, ಪ್ರಚಾರ ಹಾಗೂ ಆರೋಗ್ಯ ಮಾಹಿತಿ ಮತ್ತು ಶಿಕ್ಷಣ, ಅಗತ್ಯವಿರುವವರಿಗೆ ಪ್ರಯೋಗಾಲಯ ತಪಾಸಣೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮಾಡಿಕೊಡುವ ಸೌಲಭ್ಯ ಒದಗಿಸಲಾಗಿತ್ತು.

LEAVE A REPLY

Please enter your comment!
Please enter your name here