ಆತೂರು ದೇವಸ್ಥಾನದಲ್ಲಿ ಭಗವದ್ಗೀತೆ ಪುಸ್ತಕ ವಿತರಣೆ

0

ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮಂಗಳೂರು ಶ್ರೀ ರಾಮಕೃಷ್ಣ ಬಾಲಕಾಶ್ರಮ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಭಗವದ್ಗೀತೆ ಪುಸ್ತಕಗಳನ್ನು ಕೊಡುಗೆಯಾಗಿ ವಿತರಿಸಲಾಯಿತು.

ಶ್ರೀ ರಾಮಕೃಷ್ಣ ಬಾಲಕಾಶ್ರಮ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವಿಶಂಕರ್, ಸದಸ್ಯರಾದ ಗಣೇಶ್ ಕೆ.ಆರ್., ಪ್ರಶಾಂತ್ ಯು, ವಿದ್ಯಾಲಕ್ಷ್ಮಿಯವರು ಪುಸ್ತಕ ವಿತರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದರು. ಧಾರ್ಮಿಕ ಶಿಕ್ಷಣ ಶಿಕ್ಷಕಿ ರಕ್ಷಿತಾ ಕೆ., ದೇವಳದ ಉತ್ಸವ ಸಮಿತಿ ಕಾರ್ಯದರ್ಶಿ ವಿನೋದ್ ಪಲ್ಲಡ್ಕ, ಪ್ರಮುಖರಾದ ಲಕ್ಷ್ಮಣ ಆನೆಗುಂಡಿ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕದ ಜೊತೆಗೆ “ವಿದ್ಯಾರ್ಥಿಗಾಗಿ” ಹಾಗೂ “ದಿವ್ಯತ್ರಯರು” ಪುಸ್ತಕಗಳನ್ನು ವಿತರಿಸಲಾಯಿತು. ದೇವಳದ ಉತ್ಸವ ಸಮಿತಿ ಕಾರ್ಯದರ್ಶಿ ವಿನೋದ್ ಪಲ್ಲಡ್ಕ ಸ್ವಾಗತಿಸಿದರು.

LEAVE A REPLY

Please enter your comment!
Please enter your name here