ಪುತ್ತೂರು: ಸಮಸ್ತ ಕೇರಳ ಇಸ್ಲಾಂ ವಿಧ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಸವಣೂರು ಚಾಪಲ್ಲ ಹಿದಾಯತುಲ್ ಇಸ್ಲಾಂ ಮದರಸವು 5, 7, 10 ಹಾಗೂ +2 ತರಗತಿಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದುಕೊಂಡಿದೆ.
+2 ವಿದ್ಯಾರ್ಥಿನಿ ಮಾಜಿದಾ 400 ರಲ್ಲಿ 391ಅಂಕ ಪಡೆದು ಟಾಪ್ ಪ್ಲಸ್ನೊಂದಿಗೆ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಹನ್ನೆರಡನೇ ತರಗತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.
ಹತ್ತನೇ ತರಗತಿಯಲ್ಲಿ ಆರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಆರು ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಎರಡು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ.
ಏಳನೇ ತರಗತಿಯಲ್ಲಿ ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡರೆ ಹದಿನೆಂಟು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಎರಡು ವಿಧ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐದನೇ ತರಗತಿಯಲ್ಲಿ ಆರು ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು ಹನ್ನೊಂದು ವಿದ್ಯಾರ್ಥಿಗಳು ಪ್ರಥಮ, ಒಂಬತ್ತು ವಿದ್ಯಾರ್ಥಿಗಳು ದ್ವಿತೀಯ ಮತ್ತು ಒಂಬತ್ತು ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.