ಕೋಡಿಂಬಾಡಿ: ನಿಂತಿದ್ದ ವಾಹನಗಳಿಗೆ ಪಿಕಪ್ ಡಿಕ್ಕಿ

0

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಪಿಕಪ್ ಜೀಪೊಂದು ಡಿಕ್ಕಿಯಾದ ಪರಿಣಾಮ ಪಿಕಪ್ ಸೇರಿದಂತೆ ನಾಲ್ಕು ವಾಹನಗಳು ಜಖಂಗೊಂಡ ಘಟನೆ ಕೋಡಿಂಬಾಡಿ ಗ್ರಾಮ ಪಂಚಾಯತ್ ಕಚೇರಿ ಬಳಿ ಎ.೧೯ರಂದು ರಾತ್ರಿ ನಡೆದಿದೆ.
ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಪಿಕಪ್ ಜೀಪ್ ಕೋಡಿಂಬಾಡಿ ಗ್ರಾಮ ಪಂಚಾಯತ್ ಕಚೇರಿ ಬಳಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದ ಬೈಕ್, ಜೀಪ್ ಮತ್ತು ಕಾರೊಂದಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದಾಗಿ ಪಿಕಪ್ ಸೇರಿದಂತೆ ನಾಲ್ಕು ವಾಹನಗಳೂ ಜಖಂಗೊಂಡಿವೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here