ನೀರಕಟ್ಟೆ ಕೆಎಸ್‌ಆರ್‌ಟಿಸಿ ಬಸ್, ಕಾರು ಡಿಕ್ಕಿ ಪ್ರಕರಣ-ಗಾಯಾಳು ನೆಲ್ಯಾಡಿಯ ರೆಜಿಜೋಸೆಫ್ ನಿಧನ

0

ನೆಲ್ಯಾಡಿ: 5ದಿನದ ಹಿಂದೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ವೀಫ್ಟ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ನಿವಾಸಿ ಮಹಿಳೆಯೋರ್ವರು ಎ.೨20ರಂದು ರಾತ್ರಿ ನಿಧನರಾಗಿದ್ದಾರೆ.

 

ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೊಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಎ.೧೬ರಂದು ಮಧ್ಯಾಹ್ನ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ನೆಲ್ಯಾಡಿ ಪಡ್ಡಡ್ಕ ನಿವಾಸಿ ಶ್ರೀಮತಿ ರೆಜಿ ಜೋಸೆಫ್(೫೦ವ.)ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಎ.೨೦ರಂದು ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರೆಜಿ ಜೋಸೆಫ್‌ರವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದರು. ಕಾರಿನಲ್ಲಿದ್ದ ಇವರ ಪತಿ ಜೋಸೆಫ್, ಮಗ ಹಾಗೂ ಮಗಳು ಗಾಯಗೊಂಡಿದ್ದು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ರೆಜಿ ಜೋಸೆಫ್‌ರವರು ಪತಿ ಜೋಸೆಫ್, ನಾಲ್ವರು ಪುತ್ರರು, ಓರ್ವ ಪುತ್ರಿ, ತಂದೆ,ತಾಯಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here