ಸಮಸ್ತ ಪಬ್ಲಿಕ್ ಪರೀಕ್ಷೆ ಕೋಚಕಟ್ಟೆ ಮದ್ರಸಕ್ಕೆ ಶೇ.100ಫಲಿತಾಂಶ

0

ಪೆರಾಬೆ: ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿಕೊಟ್ಟ ವಾರ್ಷಿಕ ಪರೀಕ್ಷೆಯಲ್ಲಿ ಕೋಚಕಟ್ಟೆ ನೂರುಲ್ ಹುದಾ ಮದ್ರಸಕ್ಕೆ 5ನೇ ತರಗತಿಯಲ್ಲಿ ಶೇ.100 ತೇರ್ಗಡೆ ಫಲಿತಾಂಶ ಬಂದಿದೆ. 5ನೇ ತರಗತಿಯಲ್ಲಿ ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಈ ಪೈಕಿ 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಮದ್ರಸ ಕಾರ್ಯದರ್ಶಿ ಸಿದ್ದೀಕ್ ಅಲ್ ಅಮೀನ್‌ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here