ಕಾಂಚನ: 68ನೇ ವರ್ಷದ ಕಲಾಸೇವೆಯ ಕಾಂಚನೋತ್ಸವಕ್ಕೆ ಚಾಲನೆ

0

 

ನೆಲ್ಯಾಡಿ: ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್‌ನ 68ನೇ ವರ್ಷದ ಕಲಾಸೇವೆಯ ಕಾಂಚನೋತ್ಸವ 2022 ಹಾಗೂ 68ನೇ ವರ್ಷದ ಶ್ರೀ ತ್ಯಾಗರಾಜ, ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ, ಸ್ಥಾಪಕ ಗುರುಗಳಾದ ಸಂಗೀತರತ್ನ ಕಾಂಚನ ವೆಂಕಟಸುಬ್ರಮಣ್ಯಂ ಹಾಗೂ ಕರ್ನಾಟಕ ಕಲಾಶ್ರೀ ಕಾಂಚನ ವಿ.ಸುಬ್ಬರತ್ನಂರವರ ಪುಣ್ಯ ದಿನಾಚರಣೆ ಎ.23ರಂದು ಬೆಳಿಗ್ಗೆ ಬಜತ್ತೂರು ಗ್ರಾಮದ ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಸಂಗೀತ ಕಲಾಶಾಲೆಯಲ್ಲಿ ಆರಂಭಗೊಂಡಿತು.

ಬೆಳಿಗ್ಗೆ ವೇ.ಬ್ರ.ನಾರಾಯಣ ಬಡಕ್ಕಿಲ್ಲಾಯರ ನೇತೃತ್ವದಲ್ಲಿ ಗಣಹೋಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಂತ ಶ್ರೀ ತ್ಯಾಗರಾಜರ ಉತ್ಸವದ ಸಂಪ್ರದಾಯ ಮತ್ತು ದಿವ್ಯನಾಮ ಸಂಕೀರ್ತನೆಗಳ ವಾದ್ಯ-ಗಾಯನ-ಭಜನೆಗಳೊಂದಿಗೆ ಸಂಗೀತ ನಡಿಗೆ ಕಾಂಚನ ಮನೆಯಿಂದ ಸಂಗೀತ ಶಾಲೆಯವರೆಗೆ ನಡೆಯಿತು. ಸಂಜೆಯ ತನಕ ನಿರಂತರ ಸಂಗೀತ ಕಾರ್ಯಕ್ರಮ ನಡೆಯಲಿದ್ದು ರಾತ್ರಿ ಶ್ರೀ ಸತ್ಯನಾರಾಯಣ ಪೂಜೆ, ದುರ್ಗಾನಮಸ್ಕಾರ ಪೂಜೆ ನಡೆಯಲಿದೆ.

LEAVE A REPLY

Please enter your comment!
Please enter your name here