ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

0

ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಯ ನಡೆಯಿತು. ಕಾರ್ಯಕ್ರಮವನ್ನು ಆದರ್ಶ ಗೋಖಲೆ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರಜ್ಞೆಯ ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ವಿದ್ಯಾರ್ಥಿಗಳಿಗೆ ಭಾರತ ದೇಶದ ಸಂಸ್ಕೃತಿ, ಇತಿಹಾಸದ ಮತ್ತು ಸ್ವಾತಂತ್ರ್ಯಕ್ಕಾಗಿ ಜೀವವನ್ನೇ ತ್ಯಾಗ ಮಾಡಿದ ವೀರ ವ್ಯಕ್ತಿಗ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು. ಅವರಲ್ಲಿಯೂ ರಾಷ್ಟ್ರದ ರಕ್ಷಣೆ ನನ್ನ ಕರ್ತವ್ಯ ಎಂಬ ನಿಜವಾದ ರಾಷ್ಟ್ರಪ್ರೇಮ ಮೂಡಬೇಕು ಎಂದರು. ಸ್ವಾತಂತ್ರ್ಯ ಹೋರಾಟಗಾರರ ಪರಿಕಲ್ಪನೆ ವಿದ್ಯಾರ್ಥಿಗಳಲ್ಲಿ ಇಲ್ಲ ಇದಕ್ಕಾಗಿ ಪಠ್ಯಪುಸ್ತಕದಲ್ಲಿ ಅತಿ ಹೆಚ್ಚು ಒತ್ತನ್ನು ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ವಿವೇಕಾನಂದ ಆಡಳಿತ ಮಂಡಳಿಯ ನಿರ್ದೇಶಕಿ ಡಾ, ಸುಧಾ ಎಸ್ ರಾವ್ ಶಿಕ್ಷಕರ ಜೀವನಶೈಲಿ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಆಗಬೇಕು.ಶಿಕ್ಷಣ ವೃತ್ತಿ ಎಂದರೆ ಜವಾಬ್ದಾರಿಯುತವಾಗಿ ಮಾಡುವ ಕೆಲಸ. ವಿದ್ಯಾರ್ಥಿಗಳು ಎಡವಿದಾಗ, ತಪ್ಪು ದಾರಿಯನ್ನು ಹುಡುಕಿದಾಗ ಶಿಕ್ಷಕರು ಎಚ್ಚರಿಸಿ, ಅರಳಿದ ಹೂವಿನಂತೆ ಬೆಳಗಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯರಾದ ಬಾಲಕೃಷ್ಣ ನಾಯಕ್ , ಶಿಕ್ಷಕ ವೃತ್ತಿ ಎಂದರೆ ಪವಿತ್ರವಾದ ವೃತ್ತಿ ಅದನ್ನು ಗೌರವ ಕೊಟ್ಟು ಮಾಡುವುದು ಬಹುಮುಖ್ಯ. ನಮ್ಮ ದೇಶಕ್ಕೆ ಹಲವಾರು ಸ್ವಾತಂತ್ರ ಹೋರಾಟಗಾರರ ತ್ಯಾಗದಿಂದ ಸ್ವಾತಂತ್ರ್ಯ ಲಭಿಸಿತು, ಇಂದು ನಮ್ಮ ದೇಶವನ್ನು ರಕ್ಷಿಸಲು ವೀರ ಯೋಧರು ಗಡಿಯಲ್ಲಿ ಕಾಯುತ್ತಿದ್ದಾರೆ ಅವರ ಆದೇಶದ ಪ್ರೇಮ ವಿದ್ಯಾರ್ಥಿಗಳಿಗೂ ಸ್ಪೂರ್ತಿಯಬೇಕು ಎಂದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಆಡಳಿತ ಮಂಡಳಿಯ ಸಂಚಾಲಕರು ಗಂಗಮ್ಮ ಶಾಸ್ತ್ರಿ ಉಪಸ್ಥಿತರಿದ್ದರು.

ವಿವೇಕಾನಂದ ಶಿಕ್ಷಣ ವಿದ್ಯಾಲಯದಲ್ಲಿ ನಾಲ್ಕನೇ ರಾಂಕ್ ಪಡೆದ ದಿವ್ಯ ರವರನ್ನು ಸನ್ಮಾನಿಸಲಾಯಿತು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಪ್ರಾರ್ಥಿಸಿದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಸ್ವಾಗತಿಸಿ, ಪ್ರಾಧ್ಯಾಪಕಿ ಅನುರಾಧ ವಂದಿಸಿದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ರಕ್ಷಿತ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here