ಉಪ್ಪಿನಂಗಡಿ: ಇಂದ್ರಪ್ರಸ್ಥ ಪಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ. ಫೌಂಡೇಶನ್ ಕೋರ್ಸ್

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫೌಂಡೇಶನ್ ಕೋರ್ಸ್ ಕಾರ್ಯಕ್ರಮ ಎ. 25 ರಂದು ಜರಗಿತು.

ಯೇನೆಪೋಯ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ| ರಾಜೇಶ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಕೌಶಲ್ಯವೃದ್ಧಿಗೆ ಹೆಚ್ಚು ಒತ್ತು ಕೊಟ್ಟರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದರು.

ಪ್ರಾಂಶುಪಾಲರಾದ ಎಚ್‌ಕೆ. ಪ್ರಕಾಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಪಿಯುಸಿ ಶಿಕ್ಷಣದ ಸ್ಥೂಲ ವಿವರಣೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕರುಣಾಕರ ಸುವರ್ಣ, ಸಂಚಾಲಕರಾದ ಯುಜಿ. ರಾಧ, ಪಿಟಿಎ. ಅಧ್ಯಕ್ಷ ಅಶೋಕ ಮೊಗ್ರು ಉಪಸ್ಥಿತರಿದ್ದರು.ಉಪನ್ಯಾಸಕಿ ಸ್ವಾತಿ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here