ಮಾರ್ ಇವಾನಿಯೋಸ್ ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳ ಉದ್ಘಾಟನೆ

0

ಕುಂತೂರು: ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ 2021-22ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳ ಉದ್ಘಾಟನೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾರ್ ಇವಾನಿಯೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಂತೂರು ಇಲ್ಲಿನ ಮುಖ್ಯೋಪಾಧ್ಯಾಯಿನಿ ರೆ|ಸಿ| ಸ್ಟೆಫಿ ಥೋಮಸ್ ಅವರು ದೀಪ ಬೆಳಗಿಸಿ ಪ್ರಸಕ್ತ ವರ್ಷದ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಜವಾಬ್ದಾರಿ ಮತ್ತು ಕರ್ತವ್ಯ ಪಾಲನೆಗಳ ಕುರಿತಂತೆ ಹಿತವಚನ ಹೇಳಿದರು. ಕಾಲೇಜಿನ ಸಂಚಾಲಕರಾದ ವಂ|ಫಾ|ಡಾ| ಎಲ್ದೋ ಪುತ್ತೆನ್‌ಕಂಡತ್ತಿಲ್ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೊಧಿಸಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲೆ  ಉಷಾ ಎಂ ಎಲ್, ವಿವಿದ ವಿಷಯ ಸಂಘಗಳ ಕಾರ್ಯ ಚಟುವಟಿಕೆಗಳ ಕುರಿತು ಮಾತನಾಡಿದರು. ವಿದ್ಯಾರ್ಥಿ ಸಂಘದ ಸಂಯೋಜಕರಾದ ಪ್ರಾಧ್ಯಾಪಕ ಚಂದ್ರಶೇಖರ ಜಿ. ಎನ್. ಪದಾಧಿಕಾರಿಗಳ ಪಟ್ಟಿಯನ್ನು ವಾಚಿಸಿದರು ಮತ್ತು ಪ್ರಾಧ್ಯಾಪಕ ಹರೀಶ್ ಕುಮಾರ್ ಟಿ, ವಿವಿಧ ಸಂಘಗಳ ಕಾರ್ಯ ಚಟುವಟಿಕೆಗಳ ವಾರ್ಷಿಕ ವರದಿ ವಾಚನ ಮಾಡಿದರು. ವಿದ್ಯಾರ್ಥಿ ಶಿಕ್ಷಕಿ ಶೈಬಿ ಕೆ ಜೆ ಸ್ವಾಗತಿಸಿ, ಸುನೇಹಾ ಬಾನು ವಂದಿಸಿದರು. ರಿನಿ ವರ್ಗೀಸ್ ಮತ್ತು ಸೌಮ್ಯ ಕೆ ಗೌಡ ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಮತ್ತು ಬಳಗದವರು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here