ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾಗಿ ರಫೀಕ್ ಎಂ.ಎ ಆಯ್ಕೆ

0

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಕಾರ್ಯದರ್ಶಿಯಾಗಿ ರಫೀಕ್ ಎಂ ಎ ಸವಣೂರು ಆಯ್ಕೆಯಾಗಿದ್ದಾರೆ. ಪಕ್ಷದ ಆಂತರಿಕ ಚುನಾವಣೆಯಲ್ಲಿ ಈ ಆಯ್ಕೆ ನಡೆಸಲಾಯಿತು.

ಎಸ್.ಡಿ.ಪಿ.ಐ ಜಿಲ್ಲಾ ಪ್ರ. ಕಾರ್ಯದರ್ಶಿ ಅನ್ವರ್ ಸಾದಾತ್, ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಶಾಕಿರ್ ಅಳಕೆಮಜಲು, ಯೂಸುಫ್ ಆಲಡ್ಕ ಉಪಸ್ಥಿತರಿದ್ದರು. ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅನುಭವ ಹೊಂದಿರುವ ರಫೀಕ್ ಎಂ.ಎ ಅವರು ಪ್ರಸ್ತುತ ಸವಣೂರು ಗ್ರಾ.ಪಂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here